ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಬ್ಬಿನ ದರ ನಿಗದಿಗೆ ಆಗ್ರಹಿಸಿ, ಕಬ್ಬು ಬೆಳೆಗಾರ ರೈತರು ನಡೆಸುತ್ತಿದ್ದ ಹೋರಾಟ ವಿಕೋಪಕ್ಕೆ ತಿರುಗಿ, ಕಲ್ಲು ತೂರಾಟ ನಡೆಸಿರುವ ಘಟನೆ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಆವರಣದಲ್ಲಿ ನಡೆದಿದೆ.
ದರ ನಿಗದಿ ಹಾಗೂ ಬಾಕಿ ಬಿಲ್ ಪಾವತಿಸುವಂತೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಹಾಗೂ ಮುಧೋಳ ಭಾಗದ ರೈತರು ಇಂದು ಪ್ರಭುಲಿಂಗೇಶ್ವರ ಕಾರ್ಖಾನೆ ಎದುರು ಪ್ರತಿಭಟನೆ ಹಮ್ಮಿಕೊಂಡಿದ್ರು. ಈ ವೇಳೆ ಸಕ್ಕರೆ ಕಾರ್ಖಾನೆ ಆವರಣದಲ್ಲಿ ನಿಂತಿದ್ದ ವಾಹನಗಳು ಹಾಗೂ ಕಾರ್ಖಾನೆಯ ಕಚೇರಿ ಮೇಲೆ ಕಲ್ಲು ತೂರಾಟ ನಡೆದಿದೆ.
ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ಧಾಪೂರ ಗ್ರಾಮದಲ್ಲಿನ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆದಲ್ಲಿ ಈ ಘಟನೆ ನಡೆದಿದ್ದು, ಕಾರ್ಖಾನೆಯ ಮಾಲಿಕತ್ವಕ್ಕೆ ಸೇರಿದ ಬೊಲೆರೋ ವಾಹನ ಸೇರಿ ಇತರೇ ವಾಹನಗಳ ಗಾಜು ಪುಡಿ ಪುಡಿಯಾಗಿವೆ. ರೈತರು ನಡೆಸುತ್ತಿದ್ದ ಪ್ರತಿಭಟನೆ ಯಾರೋ ಕಿಡಿಗೇಡಿಗಳಿಂದ ಈ ಕಲ್ಲು ತೂರಾಟ ಕೃತ್ಯ ನಡೆಸಿದ್ದಾರೆ.
ಕಬ್ಬು ಬೆಳೆ ದರ ನಿಗದಿಗೆ ಆಗ್ರಹ: ಬಾಗಲಕೋಟೆ, ಬೆಳಗಾವಿಯಲ್ಲಿ ಪ್ರತಿಭಟನೆ

