ಚನ್ನಮ್ಮ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಆಗ್ರಹ : ಮುಂದುವರಿದ ಧರಣಿ

ಹೊಸದಿಗಂತ ವರದಿ ಹುಬ್ಬಳ್ಳಿ:

ರಾಣಿ ಚನ್ನಮ್ಮ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಆಗಸ್ಟ್ 31ರಂದೇ ಠರಾವು ಪಾಸಾಗಿದೆ. ಆದರೆ, ಪಾಲಿಕೆ ಆಯುಕ್ತರು ಈವರೆಗೂ ಅನುಮತಿ ನೀಡದೆ ವಿಳಂಬ ಧೋರಣೆ ಅನುಸರಿಸುತ್ತಿರುವುದು ಖ‌ಡನೀಯ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ನಗರದ ರಾಣಿ ಚೆನ್ನಮ್ಮ‌ ಮೈದಾನ(ಈದ್ಗಾ)ದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಹಾಗೂ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ನಡೆಸುತ್ತಿರುವ ಧರಣಿ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು.

ಬೆಂಗಳೂರಿನಿಂದ ಹುಬ್ಬಳ್ಳಿಗೆ ಶುಕ್ರವಾರ ಬೆಳಿಗ್ಗೆ ಬಂದ ಶಾಸಕ ಮಹೇಶ ಟೆಂಗಿನಕಾಯಿ ನೇರವಾಗಿ ಪ್ರತಿಭಟನಾ ಸ್ಥಳಕ್ಕೆ ತೆರಳಿ, ಪ್ರತಿಭಟನಾಕಾರರೊಂದಿಗೆ ಚರ್ಚಿಸಿದರು. ತಾವು ಸಹ ಧರಣಿ ಕೂತು ಬೆಂಬಲ ಸೂಚಿಸಿದರು.

ಸರ್ಕಾರ ಹಾಗೂ ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮೈದಾನದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡದಂತೆ ಕೆಲವರು ಕೋರ್ಟ್’ಗೆ ಹೋಗುತ್ತಿದ್ದಾರೆ. ಮೈದಾನ ಪಾಲಿಕೆ ಆಸ್ತಿಯಾಗಿದ್ದು ಆಯುಕ್ತರು ಸೂಕ್ತ ನಿರ್ಧಾರ ತೆಗೆದುಕೊಳ್ಳಬಹುದು ಎಂದು‌ ಕಳೆದ ಬಾರಿ ಕೋರ್ಟ್ ನಿರ್ದೇಶನ ನೀಡಿದೆ. ಹೀಗಿದ್ದಾಗಲೂ ಆಯುಕ್ತರು ಅನುಮತಿ ನೀಡಲು ಮೀನಮೇಷ ಮಾಡುತ್ತಿರುವುದು ನೋಡಿದರೆ, ಸರ್ಕಾರ ಕುಮ್ಮಕ್ಕು ನೀಡುತಗತಿರುವುದು ಸ್ಪಷ್ಟವಾಗುತ್ತಿದೆ. ಅಲ್ಲದೆ, ಇದರ ಹಿಂದೆ ಯಾವುದೋ ಹಿಡನ್ ಅಜೆಂಡಾ ಇದೆ ಎಂದು ಅನುಮಾನ ವ್ಯಕ್ತವಾಗುತ್ತಿದೆ’ ಎಂದು ಹೇಳಿದರು.

ಈದ್ಗಾ ಮೈದಾನದ ವಿಷಯ ಕುರಿತು ಹಿಂದೆ ಅನೇಕ ಘಟನೆಗಳು ನಡೆದಿವೆ. ಧ್ವಜಾರೋಹಣ ನಡೆಯುವ ಸಂದರ್ಭ ಅವಘಡಗಳು ನಡೆದಿದ್ದವು. ಮತ್ತೆ ಅಂತಹ‌ ಸನ್ನಿವೇಶಗಳಿಗೆ ರಾಜ್ಯ ಸರ್ಕಾರ ಅವಕಾಶ ನೀಡಬಾರದು. ಮೈದಾನದಲ್ಲಿ ಗಣೇಶೋತ್ಸವ ಆಚರಿಸುವ ಕುರಿತು ಈಗಾಗಲೇ ಸಮಸ್ತ ಹಿಂದೂ ಸಮಾಜ ನಿರ್ಣಯ ತೆಗೆದುಕೊಂಡಿದೆ. ಅಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡೇ ಮಾಡುತ್ತೇವೆ. ನಾವು ಯಾವುದಕ್ಕೂ ಬಗ್ಗುವುದಿಲ್ಲ’ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಗುರುವಾರ ಬೆಳಿಗ್ಗೆಯಿಂದ ಆರಂಭವಾದ ಪ್ರತಿಭಟನೆ ಅಹೋರಾತ್ರಿ ನಡೆಯಿತು. ಪಾಲಿಕೆಯ ಬಿಜೆಪಿ ಸದಸ್ಯರು ಆಯುಕ್ತರ ಕಚೇರಿಯಲ್ಲಿಯೇ ಮಲಗಿ ಪ್ರತಿಭಟಿಸಿದರು.ಶುಕ್ರವಾರು ಧರಣಿ ಮುಂದುವರಿದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!