ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರುಸ್ಥಾಪನೆಗೆ ಆಗ್ರಹ: ಕಾಂಗ್ರೆಸ್ ನಿಂದ ಉಪವಾಸ ಸತ್ಯಾಗ್ರಹ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನವನ್ನು ಪುನಃಸ್ಥಾಪಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಶನಿವಾರ ಶ್ರೀನಗರದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದೆ.

ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿ(ಜೆಕೆಪಿಸಿಸಿ) ಅಧ್ಯಕ್ಷ ತಾರಿಕ್ ಕರ್ರಾ ಅವರು ಇಲ್ಲಿನ ಎಂಎ ರಸ್ತೆಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಇಂದಿನಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

ಕರ್ರಾ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಮ್ ಅಹ್ಮದ್ ಮಿರ್ ಮತ್ತು ಪಕ್ಷದ ಶಾಸಕರು ಸೇರಿದಂತೆ ಇತರ ಹಿರಿಯ ನಾಯಕರು ಈ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದಾರೆ. ಭಾನುವಾರ ಜಮ್ಮುವಿನಲ್ಲಿ ಇದೇ ರೀತಿಯ ಉಪವಾಸ ಸತ್ಯಾಗ್ರಹ ನಡೆಯಲಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕರ್ರಾ, ಕಾಂಗ್ರೆಸ್, ಕೇಂದ್ರದಲ್ಲಿ ಅಧಿಕಾರದಲ್ಲಿರುವ ಕುರುಡು, ಕಿವುಡ ಮತ್ತು ಮೂಕ ಸರ್ಕಾರವನ್ನು ಜಾಗೃತಗೊಳಿಸುವ ಹೋರಾಟವನ್ನು ಪ್ರಾರಂಭಿಸಿದೆ ಎಂದು ಹೇಳಿದರು.

ಆಗಸ್ಟ್ 5, 2019ರಂದು ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತು. ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!