ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಶುಕ್ರವಾರ, ರಾಜ್ಯದ ಪೂರ್ವ ಭಾಗದ ಜನರ ಪ್ರತ್ಯೇಕ ರಾಜ್ಯದ ಬೇಡಿಕೆ “ತಪ್ಪಲ್ಲ” ಎಂದು ಹೇಳಿದ್ದಾರೆ.
ಪೂರ್ವ ನಾಗಾಲ್ಯಾಂಡ್ ಪ್ರದೇಶವು ಮೋನ್, ತುಯೆನ್ಸಾಂಗ್, ಕಿಫಿರ್, ಲಾಂಗ್ಲೆಂಗ್, ನೋಕ್ಲಾಕ್ ಮತ್ತು ಶಮಾಟರ್ ಎಂಬ ಆರು ಜಿಲ್ಲೆಗಳನ್ನು ಒಳಗೊಂಡಿದ್ದು ಇವುಗಳಲ್ಲಿ ಏಳು ಬುಡಕಟ್ಟುಗಳಾದ ಚಾಂಗ್, ಖಿಯಾಮ್ನಿಯುಂಗಾನ್, ಕೊನ್ಯಾಕ್, ಫೋಮ್, ಸಾಂಗ್ಟಮ್, ಟಿಖಿರ್ ಮತ್ತು ಯಿಮ್ಖಿಯುಂಗ್ ವಾಸಿಸುತ್ತಾರೆ.
“ನಾಗಾ ಜನರು ತಮ್ಮ ಮನಸ್ಸಿನಲ್ಲಿರುವುದನ್ನು ಮಾತಾನಾಡುತ್ತಾರೆ. ಅವರ ಆಲೋಚನೆ ಮತ್ತು ಬಯಕೆ ಏನೆಂದು ಹೇಳುವುದು ತಪ್ಪಲ್ಲ. ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗುತ್ತದೆ” ಎಂದು ರಿಯೊ ಹೇಳಿದ್ದಾರೆ.
ಪ್ರತ್ಯೇಕ ರಾಜ್ಯಕ್ಕಾಘಿ ಆಗ್ರಹಿಸಲು ಈಸ್ಟರ್ನ್ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಶನ್ (ENPO) ನಂತರದ ಹಾರ್ನ್‌ಬಿಲ್ ಉತ್ಸವದಲ್ಲಿ ಭಾಗವಹಿಸದಿರಲು ನಿರ್ಧರಿಸಿದೆ ಎನ್ನಲಾಗಿದೆ. ಮತ್ತು ಪ್ರತ್ಯೇಕ ರಾಜ್ಯಕ್ಕಾಗಿ ತಮ್ಮ ಬೇಡಿಕೆಯನ್ನು ಬೆಂಬಲಿಸಿ ಕ್ಷೇತ್ರದ 20 ಶಾಸಕರು ರಾಜೀನಾಮೆ ನೀಡುವಂತೆ ಆಗ್ರಹಿಸಿದೆ ಎನ್ನಲಾಗಿದೆ.
ಈ ಕುರಿತು ಸಿಎಂ ಪ್ರತಿಕ್ರಿಯೆ ನೀಡಿದ್ದು
“ನಾವು ಅವರೊಂದಿಗೆ ಮಾತನಾಡುತ್ತಿದ್ದೇವೆ ಮತ್ತು ಕೇಂದ್ರ ಗೃಹ ಸಚಿವರು ರಾಜ್ಯಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ENPOದವರಿಗೆ ಅವಕಾಶ ಕಲ್ಪಿಸುತ್ತೇವೆ. ಪ್ರಧಾನಿ ಕೂಡ ಬಂದರೆ ಅವರೊಂದಿಗೆ ಮಾತುಕತೆ ನಡೆಸುವಂತೆ ಮನವಿ ಮಾಡುತ್ತೇವೆ” ಎಂದು ರಿಯೊ ಹೇಳಿದ್ದಾರೆ.
ಮುಂದಿನ ವರ್ಷದ ಆರಂಭದಲ್ಲಿ ನಾಗಾಲ್ಯಾಂಡ್‌ನಲ್ಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈಗಿನಿಂದಲೇ ಪ್ರತ್ಯೇಕ ರಾಜ್ಯದ ಕೂಗು ವೇಗವನ್ನು ಪಡೆದುಕೊಂಡಿದೆ, ಈ ಪ್ರದೇಶದ 20 ಶಾಸಕರು ಬೇಡಿಕೆ ಈಡೇರುವವರೆಗೆ ಯಾವುದೇ ಚುನಾವಣೆಯಲ್ಲಿ ಭಾಗವಹಿಸಬಾರದು ಎಂಬ ಕರೆಗೆ ಬೆಂಬಲ ನೀಡಿದ್ದಾರೆ.