ಚುನಾವಣಾ ಬಾಂಡ್‌ ಹಗರಣದ ಕುರಿತು SIT ತನಿಖೆಗೆ ಆಗ್ರಹ: ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚುನಾವಣಾ ಬಾಂಡ್‌ ಗಳನ್ನು ಬಳಸಿಕೊಂಡು ಅಕ್ರಮ ಹಣ ವರ್ಗಾವಣೆ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡದಿಂದ (SIT) ತನಿಖೆಗೆ ಒತ್ತಾಯಿಸಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್‌ ವಜಾಗೊಳಿಸಿದೆ.

ಚುನಾವಣಾ ಬಾಂಡ್‌ ಎಂಬುದು ಅತಿದೊಡ್ಡ ಹಗರಣವಾಗಿದ್ದು, ಇದರ ತನಿಖೆಯನ್ನು SITಗೆ ವಹಿಸುಂತೆ ಆಗ್ರಹಿಸಿ ಎರಡು ಸರ್ಕಾರೇತರ ಸಂಸ್ಥೆಗಳು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು(PIL) ಹೂಡಿದ್ದವು.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಅರ್ಜಿಯನ್ನು ತಿರಸ್ಕರಿಸಿದ್ದು, ಈ ಹಿಂದೆಯೇ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದೆ.

ಫೆಬ್ರವರಿ 15 ರಂದು, ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು ‘ಅಸಂವಿಧಾನಿಕ’ ಎಂದು ತೀರ್ಪು ನೀಡಿತ್ತು.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್ ಸಂವಿಧಾನ ಪೀಠವು ಅನಾಮಧೇಯ ಚುನಾವಣಾ ಬಾಂಡ್ ಯೋಜನೆಯು ಆರ್ಟಿಕಲ್ 19 (1) (ಎ) ಅಡಿಯಲ್ಲಿ ಮಾಹಿತಿ ಹಕ್ಕು ಉಲ್ಲಂಘನೆ ಎಂದು ಹೇಳಿತ್ತು.

ಚುನಾವಣಾ ಬಾಂಡ್‌ ಯೋಜನೆಯು ಸಂವಿಧಾನದ 19 (1) (A) ವಿಧಿ ಅಡಿಯಲ್ಲಿ ನೀಡಲಾದ ಮಾಹಿತಿ ಹಕ್ಕು ಕಾಯ್ದೆಯ ಉಲ್ಲಂಘನೆಯಾಗುತ್ತದೆ. ಇದರಿಂದ ಕೊಡು-ಕೊಳ್ಳುವ ವ್ಯವಹಾರಕ್ಕೆ ಪುಷ್ಟಿ ನೀಡುತ್ತದೆ. ಹಾಗೆಯೇ, ಕಂಪನಿಗಳ ಕಾಯ್ದೆಗೆ ತಿದ್ದುಪಡಿ ತಂದಿರುವುದು ಅಸಾಂವಿಧಾನಿಕವಾಗಿದೆ. ರಾಜಕೀಯ ಪಕ್ಷಗಳು ಪಡೆಯುವ ದೇಣಿಗೆಯ ಮೂಲ ತಿಳಿಯುವ ಹಕ್ಕು ದೇಶದ ನಾಗರಿಕರಿಗೆ ಇದೆ ಎಂದು ನ್ಯಾಯಾಲಯ ತಿಳಿಸಿತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!