Sunday, June 4, 2023

Latest Posts

ಡಬ್ಲ್ಯುಎಫ್‌ಐ ಮುಖ್ಯಸ್ಥನಾ ಬಂಧನಕ್ಕೆ ಒತ್ತಾಯ: ಕ್ಯಾಂಡಲ್ ಮಾರ್ಚ್ ನಡೆಸಲು ನಿರ್ಧರಿಸಿದ ಕುಸ್ತಿಪಟುಗಳು!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೆಹಲಿಯ ಜಂತರ್​ ಮಂತರ್​ನಲ್ಲಿ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರನ್ನು ಬಂಧಿಸುವಂತೆ ಪಟ್ಟು ಹಿಡಿದು ನಡೆಯುತ್ತಿರುವ ಪ್ರತಿಭಟನೆಗೆ ಮೇ 23 ರಂದು ಒಂದು ತಿಂಗಳು ಪೂರ್ಣಗೊಳ್ಳಲಿದೆ.

ಇದೇ ದಿನ ಇಂಡಿಯಾ ಗೇಟ್‌ನಲ್ಲಿ ಕ್ಯಾಂಡಲ್ ಮಾರ್ಚ್ ನಡೆಸಲು ಭಾರತದ ಒಲಿಂಪಿಯನ್​ ಕುಸ್ತಿಪಟುಗಳಸಮಿತಿನಿರ್ಧರಿಸಿದೆ.

ಒಲಿಂಪಿಕ್ ಪದಕ ವಿಜೇತರಾದ ಬಜರಂಗ್ ಪೂನಿಯಾ, ಸಾಕ್ಷಿ ಮಲಿಕ್ ಮತ್ತು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ನೇತೃತ್ವದಲ್ಲಿ, ಕುಸ್ತಿ ಸಂಸ್ಥೆಯ ಮುಖ್ಯಸ್ಥರನ್ನು ಬಂಧಿಸಲು ಕುಸ್ತಿಪಟುಗಳು ಹೋರಾಟ ನಡೆಸುತ್ತಿದ್ದಾರೆ. ಎಪ್ರಿಲ್​ 23 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯನ್ನು ಪ್ರಾರಂಭಿಸಿದ್ದರು. ಸದ್ಯ ಮೇ 21ರ ಒಳಗಡೆ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರನ್ನು ಬಂಧಿಸುವಂತೆ ಗುಡುವು ನೀಡಿದ್ದರು. ಆದರೆ ಅವರ ಬಂಧನವಾಗದ ಹಿನ್ನೆಲೆ ಇದೀಗ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ.

ಇದೇ ವಿಚಾರವಾಗಿ ಮಾತನಾಡಿರುವ ವಿನೇಶ್ ಫೋಗಟ್ ಅವರು ದೆಹಲಿಯಲ್ಲಿ ಕಳೆದ ವರ್ಷ ನಡೆದ ರೈತ ಪ್ರತಿಭಟನೆಯ ರೀತಿಯಲ್ಲಿಯೇ ನಮ್ಮ ಪ್ರತಿಭಟನೆಯೂ ನಡೆಯಬಹುದು. ಈಗಾಗಲೇ ಖಾಪ್​ ಪಂಚಾಯತ್​ ಉನ್ನತ ಮಟ್ಟದ ಸಭೆಗಳನ್ನು ನಡೆಸಿವೆ. ಅವರ ನಿರ್ಧಾರಕ್ಕೆ ಅನುಸಾರವಾಗಿ ನಾವು ನಮ್ಮ ಪ್ರತಿಭಟನೆ ಮುಂದುವರಿಸುತ್ತೇವೆ. ಇದು ದೇಶದ ಹಿತಾಸಕ್ತಿಗೆ ಗಾಸಿಯನ್ನು ಉಂಡುಮಾಡಲೂಬಹುದು ಎಂದು ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ದೆಹಲಿಯ ಹೊರ ಭಾಗಗಳಲ್ಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!