October 12, 2026
Monday, October 12, 2026
spot_img

ಕಾವೇರಿ ನೀರು ಬಿಡದಂತೆ ಆಗ್ರಹ: ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರ ‘ಅಪ್ಪಿಕೋ’ ಚಳವಳಿ

ಹೊಸದಿಗಂತ ವರದಿ ಮಂಡ್ಯ:

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದ ಕಾವೇರಿ ಭವನದ ಬಳಿ ಇರುವ ಕಾವೇರಿ ಪ್ರತಿಮೆಗೆ ವಿಶೇಷ ಪೂಜೆ ಸಲ್ಲಿಸಿ ಅಪ್ಪಿಕೋ ಚಳವಳಿ ನಡೆಸಿದರು.

ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡದಂತೆ ರಾಜ್ಯದ ಮುಖ್ಯಮಂತ್ರಿಗೆ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿ ಕಾಳಿಕಾಂಬ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ತಂದ ನಿಂಬೆ ಹಣ್ಣಿನಿಂದ ಡಿಕೆಶಿ ಭಾವಚಿತ್ರಕ್ಕೆ ಇಳಿ ತೆಗೆದು, ಆದೇಶ ಪಾಲನೆ ಮಾಡದಂತೆ ಒತ್ತಾಯಿಸಿದರು.

ಬಿಜೆಪಿ ಕಾರ್ಯಕರ್ತರಾದ ಶಿವಕುಮಾರ್ ಆರಾಧ್ಯ, ಹೊಸಹಳ್ಳಿ ಶಿವು, ಪ್ರಸನ್ನ, ಯೋಗೇಶ್, ಮಾದರಾಜೇ ಅರಸ್, ಪ್ರಸನ್ನಕುಮಾರ್, ಕರವೇ ಅಶೋಕ್, ಶಿವಲಿಂಗಯ್ಯ, ಇತರರು ಇದ್ದರು.

Must Read