Sunday, October 1, 2023

Latest Posts

ಸರಕಾರಿ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ: ಶಾಸಕರ ಮೂಲಕ ಸರಕಾರಕ್ಕೆ ಮನವಿ ಪತ್ರ

ಹೊಸದಿಗಂತ ವರದಿ, ಕೊಡಗು:

ಸರಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಘಟಕ ಜಿಲ್ಲೆಯ ಶಾಸಕರುಗಳ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದೆ.
ಶಾಸಕದ್ವಯರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ವಿಧಾನ ಪರಿಷತ್ ಸದಸ್ಯೆ ವೀಣಾಅಚ್ಚಯ್ಯ ಹಾಗೂ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷ ರವಿಕುಶಾಲಪ್ಪ ಅವರುಗಳಿಗೆ ಮನವಿ ಸಲ್ಲಿಸಿದ ಸಂಘದ ಜಿಲ್ಲಾಧ್ಯಕ್ಷ ಪೊನ್ನಚನ ಶ್ರೀನಿವಾಸ್ ನೇತೃತ್ವದ ನಿಯೋಗ ನೌಕರರಿಗೆ ಆಗುತ್ತಿರುವ ವೇತನ ತಾರತಮ್ಯದ ಬಗ್ಗೆ ಗಮನ ಸೆಳೆದರು.
ಕೇಂದ್ರ ಸರಕಾರಿ ನೌಕರರಿಗೆ ಸರಿ ಸಮಾನವಾದ ವೇತನ ಮತ್ತು ಭತ್ಯೆಯನ್ನು ನೀಡಬೇಕು, ನೂತನ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ ಹಳೆಯ ವ್ಯವಸ್ಥೆಯನ್ನೇ ಜಾರಿಗೆ ತರಬೇಕು, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು, ಎಲ್ಲಾ ಸರಕಾರಿ ಶಾಲಾ, ಕಾಲೇಜು ಶಿಕ್ಷಕರ ಹಾಗೂ ಉಪನ್ಯಾಸಕರುಗಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ನೌಕರರ ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು.
ಜಿಲ್ಲಾ ಖಜಾಂಚಿ ರಾಜೇಶ್, ಗೌರವಾಧ್ಯಕ್ಷ ಶಮ್ಮಿ, ರಾಜ್ಯ ಪರಿಷತ್ ಸದಸ್ಯ ಜನಾರ್ಧನ, ವೀರಾಜಪೇಟೆ ತಾಲೂಕು ಸಂಘದ ಅಧ್ಯಕ್ಷ ಗುರುರಾಜ್, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಪ್ರದೀಪ್ ಮತ್ತಿತರ ಪದಾಧಿಕಾರಿಗಳು ಹಾಗೂ ನಿರ್ದೇಶಕರುಗಳು ಮನವಿ ಸಲ್ಲಿಸುವ ಸಂದರ್ಭ ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!