ಪರಿಷ್ಕೃತ ಪಠ್ಯ ಪುಸ್ತಕ ಹಿಂಪಡೆಯಲು ಆಗ್ರಹ: ಜೂ.17 ರಂದು ಪ್ರತಿಭಟನೆಗೆ ಕರೆ

ಹೊಸದಿಗಂತ ವರದಿ ಮಡಿಕೇರಿ:

ಗೊಂದಲಕ್ಕೆ ಕಾರಣವಾಗಿರುವ ರೋಹಿತ್ ಚಕ್ರತೀರ್ಥ ಸಮಿತಿ ಪರಿಷ್ಕರಿಸಿದ ಪಠ್ಯ ಪುಸ್ತಕಗಳನ್ನು ಕೈಬಿಟ್ಟು, ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯ ಪಠ್ಯ ಪುಸ್ತಕಗಳನ್ನು ಶಾಲೆಗಳಿಗೆ ವಿತರಿಸಬೇಕೆಂದು ಒತ್ತಾಯಿಸಿ ಜೂ.17 ರಂದು ಸಹಮತ ವೇದಿಕೆ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ವೇದಿಕೆಯ ಅಧ್ಯಕ್ಷ ಟಿ.ಪಿರಮೇಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು.

ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಸರ್ಕಾರದ ಅಧಿಕೃತ ಆದೇಶ ಇಲ್ಲದೆ ಪಠ್ಯ ಪರಿಷ್ಕರಣೆ ಮಾಡಿರುವುದು ಕಾನೂನಿಗೆ ವಿರುದ್ಧವಾದ ಪ್ರಕ್ರಿಯೆಯಾಗಿದೆ ಎಂದು ಆರೋಪಿಸಿದ ರಮೇಶ್, ಹಿರಿಯ ಶಿಕ್ಷಣ ತಜ್ಞರ ಸಲಹೆಗಳನ್ನು ಪಡೆಯುವುದು ಸೂಕ್ತವೆಂದು ಅಭಿಪ್ರಾಯಪಟ್ಟರು. ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆಯ ಸಮಿತಿ ಸುಮಾರು ಎರಡೂವರೆ ವರ್ಷಗಳ ಸುದೀರ್ಘ ಅಧ್ಯಯನ ನಡೆಸಿ ಪಠ್ಯಪುಸ್ತಕ ಪ್ರಕಟಿಸಿತ್ತು. ಆದರೆ ಇಂದಿನ ಸಮಿತಿ ಅಲ್ಪ ಕಾಲದಲ್ಲಿ ಅತಿ ಅವಸರದಿಂದ ಪರಿಷ್ಕರಣೆ ಮಾಡಿದ ಪಠ್ಯಪುಸ್ತಕ ಸಂಪೂರ್ಣ ಗೊಂದಲಮಯವಾಗಿದೆ ಎಂದರು.

ರಾಜ್ಯದ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣದಲ್ಲಿ ಶಿಕ್ಷಣ ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಸರಕಾರ ಸ್ವಪ್ರತಿಷ್ಠೆ ಬಿಟ್ಟು ಮಕ್ಕಳ ಭವಿಷ್ಯದತ್ತ ಗಮನಹರಿಸಿ ಈ ಹಿಂದಿನ ಪಠ್ಯ ಪುಸ್ತಕವನ್ನೇ ಮುಂದುವರೆಸಬೇಕೆಂದು ಒತ್ತಾಯಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!