ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿವಿಗೆ ಕಾಂಗ್ರೆಸ್ ಬೆಂಬಲಿಸುವುದು ಅಗತ್ಯ: ಖರ್ಗೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್ :

ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ಸಂವಿಧಾನದ ಪ್ರಕಾರ ನಡೆಯುತ್ತಿಲ್ಲ. ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಅಪಾಯದಲ್ಲಿದ್ದು, ಇವೆರಡರ ಉಳಿವಿಗೆ ಕಾಂಗ್ರೆಸ್ ನ್ನು ಬೆಂಬಲಿಸುವುದು ಇಂದಿನ ತುರ್ತು ಅಗತ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಟಿಎಂಎ ಪೈ ಕನ್ವೆನ್ಶನ್ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

2014 ರಲ್ಲಿ ಅದಾನಿಯವರ ಸಂಪತ್ತು 50 ಸಾವಿರ ಕೋಟಿ ರೂ ಇತ್ತು. 2020 ರಲ್ಲಿ ಈ ಸಂಪತ್ತು ಎರಡು ಲಕ್ಷ ಕೋಟಿ ರೂ.ಗೆ ಏರಿತು. ಆದರೆ 2020ರ ನಂತರ ಕೇವಲ ಎರಡೂವರೆ ವರ್ಷದಲ್ಲಿ ಅವರ ಸಂಪತ್ತು 12 ಲಕ್ಷ ಕೋಟಿ ರೂ.ಗೆ ಏರಿದೆ. ಇದು ಹೇಗೆ ಸಾಧ್ಯವಾಯಿತು?  ಸರ್ಕಾರಿ ಸ್ವಾಮ್ಯದ ಆಸ್ತಿಗಳಾದ ಬಂದರು, ಏರ್‌ಪೋರ್ಟ್‌ಗಳು, ರೈಲ್ವೆ ಇತ್ಯಾದಿಗಳನ್ನು ಅದಾನಿಗೆ ಹಸ್ತಾಂತರಿಸಿದ್ದಾರೆ ಎಂದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಎಂಎಲ್ಸಿ ಐವನ್ ಡಿಸೋಜ, ಕೆಪಿಸಿಸಿ ಕಾರ್ಯದರ್ಶಿ ಆರ್.ಪದ್ಮರಾಜ್ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!