ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ ಮಾಜಿ ಅಧ್ಯಕ್ಷ ಜಿಮ್ಮಿ ಕಾರ್ಟರ್ (100) ಜಾರ್ಜಿಯಾದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
1977 ರಿಂದ 1981 ರವರೆಗೆ 39ನೇ ಅಮೆರಿಕದ ಅಧ್ಯಕ್ಷರಾಗಿ ಜಿಮ್ಮಿ ಕಾರ್ಟರ್ ಸೇವೆ ಸಲ್ಲಿಸಿದ್ದರು. ಮಾನವೀಯ ಕೆಲಸಕ್ಕಾಗಿ 2002 ರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಗೆದ್ದಿದ್ದ ಕಾರ್ಟರ್ ಇಸ್ರೇಲ್ ಮತ್ತು ಈಜಿಪ್ಟ್ ಮಧ್ಯಸ್ಥಿತಿಕೆ ನಡೆಸಿ ಶಾಂತಿ ಮಾತುಕತೆ ನಡೆಸಿದ ಕೀರ್ತಿಗೆ ಪಾತ್ರರಾಗಿದ್ದರು.
ಭಾರತಕ್ಕೆ ಭೇಟಿ ನೀಡಿದ್ದ ಕಾರ್ಟರ್. ಇವರ ಗೌರವಾರ್ಥವಾಗಿ ಹರಿಯಾಣದ ಗ್ರಾಮಕ್ಕೆ ಕಾರ್ಟರ್‌ಪುರಿ ಎಂದು ಹೆಸರಿಡಲಾಗಿತ್ತು.