ಸ್ವಚ್ಛತಾ ಅಭಿಯಾನ: ದೇವಾಲಯದ ಆವರಣ ಸ್ವಚ್ಛಗೊಳಿಸಿದ ಜೆ.ಪಿ.ನಡ್ಡಾ, ಯೋಗಿ ಆದಿತ್ಯನಾಥ್ !

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋದ್ಯೆ ರಾಮ್ ಲಾಲಾ ಅವರ ಪ್ರಾಣ ಪ್ರತಿಷ್ಠಾ ಕಾರ್ಯಕ್ರದ ಹಿನ್ನೆಲೆಯಲ್ಲಿ ಪ್ರಧಾನಿ ಮೋದ ಸ್ವಚ್ಛತಾ ಅಭಿಯಾನಕ್ಕೆ ಕರೆ ನೀಡಿದ್ದು, ಎಲ್ಲೆಡೆ ಅಭಿಯಾನದಲ್ಲಿ ಬಿಜೆಪಿ ನಾಯಕರು ಪಾಲ್ಗೊಂಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಭಾನುವಾರ ದೆಹಲಿಯ ಗುರು ರವಿದಾಸ್ ಮಂದಿರದಲ್ಲಿ ಒಂದು ವಾರದ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು.

ಪ್ರಧಾನಿ ಮೋದಿಯವರ ನಿರ್ದೇಶನಗಳನ್ನು ಅನುಸರಿಸಿ, ಬಿಜೆಪಿ ಮಕರ ಸಂಕ್ರಾಂತಿಯಿಂದ ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭದ ದಿನವಾದ ಜನವರಿ 22 ರವರೆಗೆ ದೇಶದ ವಿವಿಧ ದೇವಾಲಯಗಳು ಮತ್ತು ಪವಿತ್ರ ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ನಡೆಸಲಿದೆ ಎಂದು ಅವರು ಹೇಳಿದರು.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದರು, ಅಲ್ಲಿ ಅವರು ರಾಮ ಮಂದಿರ ಸ್ಥಳದ ಆವರಣವನ್ನು ಸ್ವಚ್ಛಗೊಳಿಸಿದರು. ಸ್

ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ರಾಜ್ಯದ ಪ್ರಸಿದ್ಧ ದೇವಾಲಯವಾದ ಕೈಂಚಿ ಧಾಮದಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದರು. ಸ್ವಚ್ಛತಾ ಅಭಿಯಾನವು ಜನರ ಕಲ್ಯಾಣ ಮತ್ತು ಪರಿಸರ ಸಂರಕ್ಷಣೆಗೆ ಬಿಜೆಪಿಯ ಬದ್ಧತೆಯ ಪ್ರತಿಬಿಂಬವಾಗಿದೆ ಎಂದು ಅವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!