ದೆಹಲಿಯಲ್ಲಿ ಡೆಂಗ್ಯೂ ಅಬ್ಬರ: ರಾಜಧಾನಿಯಾದ್ಯಂತ ಎಲ್ಲಾ ಆಸ್ಪತ್ರೆಗಳಲ್ಲೂ ಅಲರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜಧಾನಿ ದೆಹಲಿಯಲ್ಲಿ ಈ ವರ್ಷ ಸೆಪ್ಟೆಂಬರ್ ಅಂತ್ಯದವರೆಗೆ 937 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ಅಕ್ಟೋಬರ್ ಮೊದಲ ಐದು ದಿನಗಳಲ್ಲಿ 321 ಪ್ರಕರಣಗಳು ವರದಿಯಾಗಿ ಒಟ್ಟು 1,258 ಪ್ರಕರಣಗಳು ಬೆಳಕಿಗೆ ಬಂದಿದೆ ಎಂದು ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (MCD) ವರದಿ ಬಿಡುಗಡೆ ಮಾಡಿದೆ.

ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಂಗಳವಾರ ನಗರದ ಎಲ್ಲಾ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಶೇಕಡಾ 10-15 ಹಾಸಿಗೆಗಳನ್ನು ಕಾಯ್ದಿರಿಸಲು ಸೂಚನೆ ನೀಡಿದ್ದಾರೆ. ರೋಗಿಗೆ ಬೆಡ್‌ ಇಲ್ಲ ಅಂತ ಎಂದು ಕಾರಣ ಹೇಳಿ ಪ್ರವೇಶ ನಿರಾಕರಿಸಬಾರದು ಎಂದು ಆದೇಶಿಸಿದರು. ಕಳೆದ ಕೆಲವು ವಾರಗಳಲ್ಲಿ ಕೋವಿಡ್-19 ಬೆಡ್‌ಗಳ ಕಡಿಮೆ ಆಕ್ಯುಪೆನ್ಸೀ ದರವನ್ನು ನೋಡಿದ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರವು ಡೆಂಗ್ಯೂ ರೋಗಿಗಳಿಗೆ ಅವಕಾಶ ಕಲ್ಪಿಸಲು ಖಾಲಿ ಇರುವ ಹಾಸಿಗೆಗಳನ್ನು ಬಳಸಲು ಆಸ್ಪತ್ರೆಗಳಿಗೆ ಸೂಚಿಸಿದೆ.

ಪ್ರಸ್ತುತ ಹವಾಮಾನ ಪರಿಸ್ಥಿತಿ ರೋಗ ಹರಡುವಿಕೆಗೆ ಅನುಕೂಲಕರವಾಗಿದೆ ಎಂದು ಸಿಸೋಡಿಯಾ ಹೇಳಿದರು. ಕಳೆದ ಎರಡು ವಾರಗಳಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಂಡುಬಂದಿದೆ ಎಂದು ಸೂಚಿಸಿದ ಉಪಮುಖ್ಯಮಂತ್ರಿ, ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಭಯಪಡುವ ಅಗತ್ಯವಿಲ್ಲ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!