ಲೆಕ್ಕವಿಲ್ಲದಷ್ಟು ಹೆಚ್ಚಾಗ್ತಿದೆ ಡೆಂಗ್ಯೂ ಕೇಸ್‌, ಬೆಂಗಳೂರಿನಲ್ಲಿ ಬಿಬಿಎಂಪಿ ಮನೆ ಮನೆ ಸರ್ವೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದ್ದು, ಬಿಬಿಎಂಪಿ ಮನೆ ಮನೆ ಸರ್ವೆಗೆ ಮುಂದಾಗಿದೆ.

ಸೋಂಕಿತರನ್ನು ಪತ್ತೆ ಮಾಡಲು, ಜನರಲ್ಲಿ ಜಾಗೃತಿ ಮೂಡಿಸಲು ಬಿಬಿಎಂಪಿ ಈ ಕ್ರಮಕ್ಕೆ ಮುಂದಾಗಿದೆ.

ಆಯಾ ವಲಯ ವ್ಯಾಪ್ತಿಯಲ್ಲಿ ಆರೋಗ್ಯ ಪರಿವೀಕ್ಷರು, ಆಶಾ ಕಾರ್ಯಕರ್ತೆಯರು, ಎಎನ್​ಎಂಗಳು ಹಾಗೂ ಲಿಂಕ್ ವರ್ಕರ್ಸ್​ಗಳು ಸೇರಿದಂತೆ 1000 ಮನೆಗಳಿಗೊಂದು ಬ್ಲಾಕ್ ಅನ್ನು ರಚಿಸಿಕೊಳ್ಳಬೇಕು. ನಂತರ ಲಾರ್ವಾ ಇರುವ ತಾಣಗಳನ್ನು ಗುರುತಿಸುವುದು, ನಾಗರಿಕರಲ್ಲಿ ಅರಿವು ಮೂಡಿಸುವುದು ಹಾಗೂ ಯಾರಿಗಾದರು ಜ್ವರ ಬಂದಿದ್ದಲ್ಲಿ ಅಂತಹವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಮಾಡಿಸಕೊಳ್ಳಲು ತಿಳಿಸುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದ್ದಾರೆ.

ಈಡಿಸ್ ಈಜಿಪ್ಟೈ ಎಂಬ ಸೊಳ್ಳೆಗಳಿಂದ ಡೆಂಗ್ಯೂ ಹರಡುತ್ತದೆ. ಈ ನಿಟ್ಟಿನಲ್ಲಿ ಸೊಳ್ಳೆ ನಿಯಂತ್ರಣ ಮಾಡಲು ಲಾರ್ವಾ ಉತ್ಪಿತ್ತಿಯಾಗುವ ತಾಣಗಳನ್ನು ಗುರುತಿಸಿ ನಾಶಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!