ಹೊಸದಿಗಂತ ಡಿಜಿಟಲ್ ಡೆಸ್ಕ್:
ಡೆಂಗ್ಯೂ ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಮಳೆಗಾಲ ಮುಗಿಯುವವರೆಗೆ ಕನಿಷ್ಠ ಎರಡು ತಿಂಗಳ ಕಾಲ ಎಲ್ಲರೂ ಹೆಚ್ಚಿನ ಜಾಗರೂಕರಾಗಿರಬೇಕು. ಮಳೆಗಾಲ ಮುಗಿಯುವವರೆಗೂ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ವರ್ಷ 68,000 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 25,000 ಪ್ರಕರಣಗಳು ವರದಿಯಾಗಿದ್ದವು. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದೆರ ಈ ಬಾರಿ ಪ್ರಕರಣ ಸಂಖ್ಯೆ ಗಮನಾರ್ಹವಾಗಿ ಹೆಚ್ಚಾಗಿದೆ. ಪರಿಸ್ಥಿತಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪರೀಕ್ಷೆಗಳ ಪರಿಣಾಮಕಾರಿ ರೀತಿಯಲ್ಲಿ ನಡೆಸಲಾಗುತ್ತಿದೆ. ಕೋವಿಡ್ ಮಾದರಿಯಲ್ಲಿ ನಿಯಂತ್ರಣ ಮಾಡಬೇಕೆಂದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ಹಾಗೂ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದೇವೆ. ಜೊತೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.