ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಪ್ರತಿ ದಿನ ಒಂದಲ್ಲವೊಂದು ಸಾವಿನ ಪ್ರಕರಣಗಳು ವರದಿಯಾಗುತ್ತಿವೆ.
ಹಾವೇರಿ ಜಿಲ್ಲೆಯಲ್ಲಿ ಡೆಂಗ್ಯೂಗೆ 13 ವರ್ಷದ ಬಾಲಕ ಬಲಿಯಾಗಿದ್ದಾನೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ಪ್ರೇಮ್ಕುಮಾರ್ ಎಂಬ ಬಾಲಕ ಮೃತಪಟ್ಟಿದ್ದಾನೆ.
ಪ್ರೇಮ್ ಕುಮಾರ್ ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಎಂದು ತಿಳಿದುಬಂದಿದೆ. ಸ್ಥಳಕ್ಕೆ ರಾಣೆಬೆನ್ನೂರು ಟಿಹೆಚ್ಒ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.