ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಣೆ: ಬಿಲ್ಲವ ಸಮಾಜ ಅಸಮಾಧಾನ

ಹೊಸದಿಗಂತ ವರದಿ, ಕೊಡಗು:
ನವದೆಹಲಿಯಲ್ಲಿ ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರದ ಆಯ್ಕೆ ಸಮಿತಿ ರದ್ದುಗೊಳಿಸಿರುವುದಕ್ಕೆ ಸುಂಟಿಕೊಪ್ಪ ಹೋಬಳಿ ನಾರಾಯಣ ಗುರು ಬಿಲ್ಲವ ಸೇವಾ ಸಂಘದ ಪದಾಧಿಕಾರಿಗಳು ಅಸಮಾಧಾನ ವ್ಯಕಪಡಿಸಿದ್ದಾರೆ.
ನಾಡಕಚೇರಿಯ ಉಪತಹಶೀಲ್ದಾರ್ ಶಿವಪ್ಪ ಅವರಿಗೆ ಮನವಿ ಸಲ್ಲಿಸಿದ ಪ್ರಮುಖರು ಸ್ತಬ್ಧಚಿತ್ರಕ್ಕೆ ಅವಕಾಶ ನೀಡಬೇಕೆಂದು ಒತ್ತಾಯಿಸಿದರು.
ಬಿಲ್ಲವ ಸಂಘದ ಅಧ್ಯಕ್ಷ ಮಣಿ ಮುಖೇಶ್ ಮಾತನಾಡಿ ಜಾತಿ, ಮತ, ಧರ್ಮ ಬೇಧವಿಲ್ಲದೆ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಪ್ರತಿಪಾದಿಸಿ ಜನರ ಅಭಿವೃದ್ಧಿಗಾಗಿ ಶ್ರಮಿಸಿದ ಶ್ರೀ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರದರ್ಶಿಸಲು ಅವಕಾಶ ನೀಡದಿರುವುದು ಬೇಸರ ತಂದಿದೆ. ಇದು ಗುರುಗಳಿಗೆ ಮಾಡಿರುವ ಅವಮಾನವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭ ಸಂಘದ ಕಾರ್ಯದರ್ಶಿ ವೆಂಕಪ್ಪ ಕೋಟ್ಯಾನ್, ಉಪಾಧ್ಯಕ್ಷೆ ಗೀತಾ ವಿಶ್ವನಾಥ್, ಗೌರವಾಧ್ಯಕ್ಷ ಬಿ.ಕೆ.ಮೋಹನ್, ಪದಾಧಿಕಾರಿಗಳಾದ ರಮೇಶ್ ಪೂಜಾರಿ, ಪದ್ಮನಾಭ ಪೂಜಾರಿ, ಜಿನ್ನಪ್ಪ ಪೂಜಾರಿ, ನಾಗೇಶ್ ಪೂಜಾರಿ, ದೇಯಿಬೈದೇದಿ ಬಿಲ್ಲವ ಮಹಿಳಾ ಸಂಘದ ಪದಾಧಿಕಾರಿಗಳಾದ ಪೂರ್ಣಿಮಾ ರವಿ, ಮಹಿಮಾ ಸತ್ಯ ಮತ್ತಿತರರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!