ಹಿಂದೂ ಧರ್ಮದ ಅವಹೇಳನ ಕಾಂಗ್ರೆಸ್ ಗೆ ರೂಡಿಯಾಗಿದೆ: ಕಲಬುರಗಿಯಲ್ಲಿ ಬಿಜೆಪಿ ಕಿಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌, ಕಲಬುರಗಿ
ಕಾಂಗ್ರೆಸ್ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿಕೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಬುಧವಾರ ನಗರದ ಸದಾ೯ರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಮುಖಂಡರು, ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಮಾತನಾಡುವುದು ಕಾಂಗ್ರೆಸ್ ನಾಯಕರಿಗೆ ರೂಢಿಯಾಗಿದೆ. ಒಂದು ವರ್ಗದ ಮತ ಪಡೆಯಲು ನಿರಂತರವಾಗಿ ಹಿಂದೂ ಧರ್ಮವನ್ನು ಅವಹೇಳನ ಮಾಡಲಾಗುತ್ತಿದೆ. ಈ ನೀತಿ ಸರಿಯಲ್ಲ, ಮುಂದಿನ ದಿನಗಳಲ್ಲಿ ಇದು ಕಾಂಗ್ರೆಸ್ ಪಕ್ಷಕ್ಕೆ ತಿರುಗುಬಾಣವಾಗಲಿದೆ ಎಂದು ಹೇಳಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಿನಿಂದ ಕಾಂಗ್ರೆಸ್ ಹಿಂದೂಗಳ ಬಗ್ಗೆ ಅವಮಾನಕಾರಿ ಪದ ಬಳಕೆ ಮಾಡುತ್ತಿದೆ. ಇದು ಕಾಂಗ್ರೆಸ್‌ನ ಸಂಸ್ಕೃತಿಯನ್ನು ತೋರಿಸುತ್ತದೆ. ಸಮಾಜದಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ ಎಂದು ದೂರಿದರು.
ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬೇಷರತ್ತಾಗಿ ಕ್ಷಮೆ ಕೇಳಬೇಕು. ಹಿಂದೂ ಧರ್ಮದ ಬಗ್ಗೆ ಹೇಳಿಕೆ ಹಿಂಪಡೆಯಬೇಕು. ಕಾಂಗ್ರೆಸ್ ಪಕ್ಷದಿಂದ ಅವರನ್ನು ಉಚ್ಛಾಟಿಸಬೇಕು ಎಂದು ಘೋಷಣೆ ಕೂಗಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!