ಹೊಸದಿಗಂತ ಡಿಜಿಟಲ್ ಡೆಸ್ಕ್:
2024ರ ಇಂಟರ್‌ನ್ಯಾಷನಲ್ ಮಿಸ್ ಯುನಿವರ್ಸ್ ಸ್ಪರ್ಧೆಯಲ್ಲಿ ವಿಶ್ವ ಸುಂದರಿ ಯಾರೆಂಬುದು ಘೋಷಣೆಯಾಗಿದೆ. ಡೆನ್ಮಾರ್ಕ್ 21 ವರ್ಷದ ವಿಕ್ಟೋರಿಯಾ ಕ್ಜೇರ್ ವಿಜೇತರಾಗಿ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಮೆಕ್ಸಿಕೋದ ಮರಿಯಾ ಫೆರ್ನಾಂಡಾ ಬೆಲ್ಟ್ರಾನ್ ಮೊದಲ ರನ್ನರ್ ಅಪ್ ಆಗಿ, ನೈಜೀರಿಯಾದ ಸಿನಿದಿಮ್ಮಾ ಅಡೆಟ್ಶಿನಾ ಎರಡನೇ ರನ್ನರ್ ಅಪ್ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಮೆಕ್ಸಿಕೋ ನಗರದಲ್ಲಿ ನಡೆದ 73ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ವಿಶ್ವದಾದ್ಯಂತ 130 ಸುಂದರ ಮಹಿಳೆಯರು ಭಾಗವಹಿಸಿದ್ದರು.