Thursday, March 23, 2023

Latest Posts

ಡಿ‌ನೋಟಿಫಿಕೇಷನ್ ಪ್ರಕರಣ: ಹೆಚ್.ಡಿ.ಕುಮಾರಸ್ವಾಮಿ ಹಾಜರಿಗೆ ಕೋರ್ಟ್ ಖಡಕ್ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಲಗೇವಡೇರಹಳ್ಳಿ ಡಿ‌ನೋಟಿಫಿಕೇಷನ್ ಪ್ರಕರಣಕ್ಕೆ(denotification case )ಸಂಬಂಧಿಸಿಹೆಚ್.ಡಿ.ಕುಮಾರಸ್ವಾಮಿ(HD Kumaraswamy ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್(special Court) ಅಸಮಾಧಾನ ವ್ಯಕ್ತಪಡಿಸಿದೆ.

ಹೆಚ್.ಡಿ.ಕುಮಾರಸ್ವಾಮಿಗೆ ಕೋರ್ಟ್ ಹಾಜರಾತಿಗೆ ಸಮನ್ಸ್ ನೀಡಿದ ಹಿನ್ನೆಲೆಯಲ್ಲಿ ವಿನಾಯಿತಿ ಕೋರಿ ಹೆಚ್.ಡಿ.ಕುಮಾರಸ್ವಾಮಿ ಪರ ಅರ್ಜಿ ಸಲ್ಲಿಸಿದರು. ಇದರಿಂದ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿ, ಮುಂದಿನ ವಿಚಾರಣೆ ವೇಳೆ ತಪ್ಪದೇ ಹಾಜರಾಗಬೇಕೆಂದು ಸೂಚನೆ ನೀಡಿದೆ.

ಇದಕ್ಕೆ ಕುಮಾರಸ್ವಾಮಿ ಪರ ವಕೀಲ ಪ್ರತಿಕ್ರಿಯಿಸಿ, ಹೆಚ್.ಡಿ.ಕುಮಾರಸ್ವಾಮಿ ಹಾಜರಿ ಇರಿಸುವುದಾಗಿ ಭರವಸೆ ನೀಡಿದರು. ಬಳಿಕ ನ್ಯಾಯಾಲಯ ಮಂದಿನ ವಿಚಾರಣೆಯನ್ನು ಮಾರ್ಚ್‌ 21ಕ್ಕೆ ಮುಂದೂಡಿದೆ.

ಚಾಮರಾಜನಗರದ ಎಂ.ಎಸ್.ಮಹಾದೇವಸ್ವಾಮಿ ದೂರು ದಾಖಲಿಸಿದ್ದರು. ಈ ಹಿಂದೆ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಆದ್ರೆ, ಜನಪ್ರತಿನಿಧಿಗಳ ನ್ಯಾಯಾಲಯ, ಬಿ ರಿಪೋರ್ಟ್ ತಿರಸ್ಕರಿಸಿ ವಿಚಾರಣೆಗೆ ಹಾಜರಾಗಬೇಕೆಂದು ಕುಮಾರಸ್ವಾಮಿಗೆ ಸಮನ್ಸ್ ಜಾರಿಗೊಳಿಸಿತ್ತು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!