Thursday, December 18, 2025

ಲಕ್ನೋ ಕ್ರೀಡಾಂಗಣದಲ್ಲಿ ದಟ್ಟ ಮಂಜು: ಭಾರತ-ಆಫ್ರಿಕಾ ನಾಲ್ಕನೇ ಟಿ20 ಮಾರ್ಚ್ ರದ್ದು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯವನ್ನು ರದ್ದುಗೊಳಿಸಲಾಗಿದೆ.

ಇಂದು ಲಕ್ನೋದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಆದರೆ ಹವಾಮಾನ ವೈಪರಿತ್ಯದಿಂದಾಗಿ ಉಭಯ ತಂಡಗಳ ನಡುವಿನ ಈ ಪಂದ್ಯವನ್ನು ರದ್ದುಗೊಳಿಸಲಾಗಿದೆ.

ಭಾರೀ ಮುಸುಕು ಹಾಗೂ ದಟ್ಟ ಮಂಜು ಮೈದಾನದ ತುಂಬಾ ಹರಡಿದ್ದರಿಂದ ಅಂಪೈರ್​ಗಳು ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಿದ್ದಾರೆ. ಹೀಗಾಗಿ ಈ ಪಂದ್ಯ ಟಾಸ್ ಕೂಡ ನಡೆಯದೆ ರದ್ದಾಗಿದೆ.

ವಾಸ್ತವವಾಗಿ ಪೂರ್ವನಿಗದಿಯಂತೆ ಈ ನಾಲ್ಕನೇ ಪಂದ್ಯದ ಟಾಸ್ ಭಾರತೀಯ ಕಾಲಮಾನ ಸಂಜೆ 6:30 ಕ್ಕೆ ನಡೆಯಬೇಕಿತ್ತು. ಆ ಬಳಿಕ ಸಂಜೆ 7 ಗಂಟೆಗೆ ಆಟ ಆರಂಭವಾಗಬೇಕಿತ್ತು. ಆದರೆ ರಾತ್ರಿ 9:30 ರವರೆಗೂ ಕಾದರೂ ಮಂಜು ಕಡಿಮೆಯಾಗದ ಕಾರಣ ಪಂದ್ಯವನ್ನು ರದ್ದುಗೊಳಿಸಲಾಯಿತು.

error: Content is protected !!