ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ಟಿ20 ಪಂದ್ಯ ಲಕ್ನೋದಲ್ಲಿ ನಡೆಯಲಿದೆ. ಪ್ರತಿಕೂಲ ಹವಾಮಾನದಿಂದಾಗಿ ಪಂದ್ಯದ ಟಾಸ್ ವಿಳಂಬವಾಗಿದೆ. ಸಂಜೆ 6:30ಕ್ಕೆ ನಡೆಯಬೇಕಿದ್ದ ಟಾಸ್ ಇನ್ನೂ ನಡೆದಿಲ್ಲ. ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ಐದು ಪಂದ್ಯಗಳ ಈ ಸರಣಿಯ ಮೂರು ಪಂದ್ಯಗಳ ಮುಗಿಯುವ ಹೊತ್ತಿಗೆ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡ 2-1 ಅಂತರದಲ್ಲಿ ಪ್ರಾಬಲ್ಯ ಸಾಧಿಸಿದೆ. ಇನ್ನುಳಿದ ಎರಡು ಪಂದ್ಯಗಳಲ್ಲಿ ಒಂದನ್ನು ಗೆದ್ದರೆ ಟೀಮ್ ಇಂಡಿಯಾ, ಸರಣಿಯನ್ನು ತನ್ನದಾಗಿಸಿಕೊಳ್ಳಲಿದೆ. ಆದರೆ, ಎದುರಾಳಿ ಹರಿಣ ಪಡೆ ಟಿ20ಐ ಸರಣಿಯನ್ನು ಗೆಲ್ಲಬೇಕೆಂದರೆ, ಕೊನೆಯ ಎರಡರಲ್ಲಿಯೂ ಗೆಲುವು ಅಗತ್ಯ.
ಮೊದಲನೇ ಟಿ20ಐ ಪಂದ್ಯದಲಿ ಭಾರತ ತಂಡ 101 ರನ್‌ಗಳ ಭರ್ಜರಿ ಗೆಲುವು ಪಡೆದಿತ್ತು. ಆದರೆ, ನಂತರ ನಡೆದಿದ್ದ ಎರಡನೇ ಪಂದ್ಯದಲ್ಲಿ ಭಾರತ 51 ರನ್‌ಗಳಿಂದ ಸೋಲು ಅನುಭವಿಸಿತ್ತು. ನಂತರ ಮೂರನೇ ಟಿ20ಐ ಪಂದ್ಯದಲ್ಲಿಯೂ ಪ್ರಾಬಲ್ಯ ನಡೆಸಿದ್ದ ಟೀಮ್ ಇಂಡಿಯಾ 7 ವಿಕೆಟ್‌ಗಳಿಂದ ಗೆದ್ದು ಬೀಗಿತ್ತು.
ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI
ಭಾರತ: ಅಭಿಷೇಕ್ ಶರ್ಮಾ, ಶುಭಮನ್ ಗಿಲ್/ಸಂಜು ಸ್ಯಾಮ್ಸನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಿತೇಶ್ ಶರ್ಮಾ, ಹರ್ಷಿತ್ ರಾಣಾ/ ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಜಸ್‌ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ
ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್, ಏಡೆನ್ ಮಾರ್ಕ್ರಮ್ (ನಾಯಕ), ಟ್ರಿಸ್ಟನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಡೇವಿಡ್ ಮಿಲ್ಲರ್, ಡೊನೊವನ್ ಫೆರೀರಾ, ಜಾರ್ಜ್ ಲಿಂಡೆ, ಮಾರ್ಕೊ ಯೆನ್ಸನ್, ಕಾರ್ಬಿನ್ ಬಾಷ್, ಎನ್ರಿಕ್ ನೊರ್ಕಿಯಾ, ಒಟ್ನೀಲ್ ಬಾರ್ಟ್‌ಮ್ಯಾನ್

