ಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಅಪಾರ್ಮೆಂಟ್ 4ನೇ ಮಹಡಿಯಿಂದ ಜಿಗಿದು ದಂತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಅಪಾರ್ಮೆಂಟ್ ಒಂದರ 4ನೇ ಮಹಡಿಯಿಂದ ಜಿಗಿದು ದಂತ ವೈದ್ಯಕೀಯ ವಿದ್ಯಾರ್ಥಿನಿ ಸೌಮ್ಯ(19) ಎಂಬುವರು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ.
ಪರೀಕ್ಷೆ ವಿಚಾರವಾಗಿ ಭಯಗೊಂಡಿದ್ದ ಸೌಮ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಹೇಳಲಾಗುತ್ತಿದೆ. ಈ ಹಿಂದೆಯೂ ಆತ್ಮಹತ್ಯೆಗೆ ಡೆಂಟಲ್ ವಿದ್ಯಾರ್ಥಿನಿ ಸೌಮ್ಯ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಈ ಸಂಬಂಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.