ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನದ ಉದಯಪುರಲ್ಲಿ ಡೆಂಟಲ್ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಶ್ವೇತಾ ಸಿಂಗ್ ಮೃತ ವಿದ್ಯಾರ್ಥಿನಿ. ಜಮ್ಮು ಕಾಶ್ಮೀರ ವಿದ್ಯಾರ್ಥಿನಿ ಡೆಂಟಲ್ ಕೋರ್ಸ್ನ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು.ಶ್ವೇತಾ ಸಿಂಗ್ ಆಕೆಯ ಸ್ನೇಹಿತರು ಈ ವಿಚಾರವನ್ನು ಹಾಸ್ಟೆಲ್ ಮ್ಯಾನೇಜ್ಮೆಂಟ್ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಡೆಂಟಲ್ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿದ್ದು, ಇದರಲ್ಲಿ ತನಗೆ ಡೆಂಟಲ್ ಕಾಲೇಜಿನ ಪ್ರಾಧ್ಯಾಪಕರು ಕಿರುಕುಳ ನೀಡುತ್ತಿದ್ದು, ಸಮಯಕ್ಕೆ ಸರಿಯಾಗಿ ಪರೀಕ್ಷೆಗಳನ್ನು ನಡೆಸುತ್ತಿಲ್ಲ ಎಂದು ದೂರಿದ್ದಾರೆ. ಡೆಂಟಲ್ ವಿದ್ಯಾರ್ಥಿನಿ ಶ್ವೇತಾ ಸಿಂಗ್, ಸಾವಿನ ಬಳಿಕ ಉಳಿದ ವಿದ್ಯಾರ್ಥಿಗಳು ಪ್ರಾಧ್ಯಾಪಕರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
ಪ್ರಾಧ್ಯಾಪಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆಯನ್ನು ಕಾಲೇಜಿನ ನಿರ್ದೇಶಕರು ವಿದ್ಯಾರ್ಥಿಗಳಿಗೆ ನೀಡಿದ್ದಾರೆ. ಆತ್ಮಹತ್ಯೆ ಕೇಸ್ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಆಧಾರದ ಮೇಲೆ ಪೊಲೀಸರು ಸೂಕ್ತ ಕ್ರಮವನ್ನು ಕೈಗೊಳ್ಳುತ್ತಾರೆ. ಈ ಆತ್ಮಹತ್ಯೆಗೆ ಕಾರಣರಾದವನ್ನು ಡೆಂಟಲ್ ಕಾಲೇಜಿನಿಂದಲೇ ವಜಾಗೊಳಿಸುವುದಾಗಿ ಕಾಲೇಜು ನಿರ್ದೇಶಕರು ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ.