ರಾಜ್ಯ ಚುನಾವಣೆಗೆ ಅಗತ್ಯ ಸಿದ್ದತೆಗೆ ಇಲಾಖೆ ಕ್ರಮ: ಎಡಿಜಿಪಿ ಅಲೋಕ್ ಕುಮಾರ್

ಹೊಸ ದಿಗಂತ ವರದಿ, ಕಲಬುರಗಿ

ರಾಜ್ಯ ವಿಧಾನಸಭಾ ಚುನಾವಣೆಗೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಪೋಲಿಸ್ ಇಲಾಖೆ ಈಗಾಗಲೇ ಮುಂದಾಗಿದೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕಕುಮಾರ ಹೇಳಿದರು.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೌಡಿಗಳು ಅದರಲ್ಲೂ ಕಳೆದ ಐದು ವರ್ಷಗಳಿಂದ ಐದಕ್ಕಿಂತ ಹೆಚ್ಚು ಪ್ರಕರಣಗಳು ದಾಖಲೆಯಾದವರ ಮೇಲೆ ನಿಗಾ ವಹಿಸುವುದು, ಅಗತ್ಯಬಿದ್ದರೆ ಗುಂಡಾ ಕಾಯ್ದೆ ಅಡಿ ಕ್ರಮ‌ ಕೈಗೊಳ್ಳುವುದರ ಜೊತೆಗೆ ಇತರೆ ನಿಟ್ಟಿನಲ್ಲಿ ಹೆಜ್ಜೆ ಇಡಲು ಮುಂದಾಗಲಾಗಿದೆ ಎಂದು ವಿವರಣೆ ನೀಡಿದರು.

ರೌಡಿಗಳು ಯಾವುದೇ ಪಕ್ಷದಲ್ಲಿ ಇರಲಿ ಅಥವಾ ಸೇರಲಿ. ಆದರೆ ಇಲಾಖೆ ಮಾತ್ರ ಕ್ರಮ ಕೈಗೊಳ್ಳುವುದು ಖಚಿತ. ಪ್ರಮುಖವಾಗಿ ಕಾನೂನು ಸುವ್ಯವಸ್ಥೆ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದರು.

ಬಂದೂಕು ಪರವಾನಗಿ ಪಡೆದವರ ಪಟ್ಟಿ ಪರಿಶೀಲನೆ‌ ಜೊತೆಗೆ ಯಾವ ಉದ್ದೇಶಕ್ಕಾಗಿ ಪಡೆಯಲಾಗಿದೆ ಎಂಬುದನ್ನು ಸಹ ಅವಲೋಕಿಸಲಾಗುವುದು.‌ ವಾರಂಟ್ ಗೆ ಉತ್ತರಿಸದವರ ಪತ್ತೆಗೂ ಇಲಾಖೆಯೂ ಕಠಿಣ ಕ್ರಮ ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಶಾಸಕ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರಕರಣವನ್ನು ಅವಲೊಕಿಸಿ ‌ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು.‌ಇದರಲ್ಲಿ ರಕ್ಷಣೆಯ ಮಾತು ಬಾರದು ಎಂದು ಎಡಿಜಿಪಿ ಅಲೋಕಕುಮಾರ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!