ಹೊಸದಿಗಂತ ವರದಿ, ಬಳ್ಳಾರಿ:
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಕುರಿತಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹೊರತರಲಾದ “ಪ್ರಗತಿಪರ ಅಭಿವೃದ್ಧಿಗಾಗಿ, ನುಡಿದಂತೆ ನಡೆದಿದ್ದೇವೆ” ಎಂಬ ಕಿರುಹೊತ್ತಿಗೆಯನ್ನು ಯುವಜನ ಸಬಲೀಕರಣ, ಕ್ರೀಡಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಇಂದು ಬಿಡುಗಡೆಗೊಳಿಸಿದರು.
ನಗರದ ವಿಮ್ಸ್ ಮೈದಾನದಲ್ಲಿ ಜಿಲ್ಲಾಡಳಿತವು 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ವೇಳೆ “ಪ್ರಗತಿಪರ ಅಭಿವೃದ್ಧಿಗಾಗಿ, ನುಡಿದಂತೆ ನಡೆದಿದ್ದೇವೆ” ಎಂಬ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ, ಉಪಮೇಯರ್ ಜಾನಕಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಪೊಲೀಸ್ ಮಹಾನಿರೀಕ್ಷರಾದ ಲೋಕೇಶ್ ಕುಮಾರ್, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು, ಎಸ್ಪಿ ರಂಜಿತ್‍ಕುಮಾರ್ ಬಂಡಾರು, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಎಡಿಸಿ ಮೊಹಮ್ಮದ್ ಜುಬೇರ್, ಮಹಾನಗರ ಪಾಲಿಕೆ ಆಯುಕ್ತ ಎಸ್.ಎನ್.ರುದ್ರೇಶ್ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.