spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಧಾರ್ಮಿಕ ದತ್ತಿ ಇಲಾಖೆ- ದೇವಸ್ಥಾನಗಳ ಹಣ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳ ಬಳಕೆಗೆ ತಡೆ: ಸರ್ಕಾರದಿಂದ ಮಹತ್ವದ ಆದೇಶ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸ ದಿಗಂತ ವರದಿ, ಉಡುಪಿ:

ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಸ್ತಿಕ್ ಮತ್ತು ವರ್ಷಾಸನ ಬಿಡುಗಡೆ ಕುರಿತು ಎದ್ದಿರುವ ಚರ್ಚೆಯ ಕುರಿತು ಸರ್ಕಾರ ಅಂತಿಮ ತೀರ್ಮಾನ ಕೈಗೊಂಡಿದೆ. ರಾಜ್ಯದ 757 ಪ್ರಾರ್ಥನಾ ಕೇಂದ್ರಗಳಿಗೆ ಹಾಗೂ 111 ವರ್ಷಾಸನ ಪಡೆಯುತ್ತಿರುವ ಪ್ರಾರ್ಥನಾ ಕೇಂದ್ರಗಳಿಗೆ ಸರ್ಕಾರ ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ನೀಡುತ್ತಿದ್ದ ಅನುದಾನ ತಡೆ ಹಿಡಿದಿದ್ದು, ಸೋಮವಾರ ಅಧಿಕೃತ ಆದೇಶ ಹೊರಡಿಸಿದೆ.

ಇನಾಂ ರದ್ದತಿ ಕಾಯ್ದೆ 1977 ರ ಪರಿಹಾರಾರ್ಥವಾಗಿ ನೀಡುತ್ತಿರುವ ತಸ್ತಿಕ್ ಮತ್ತು ವರ್ಷಾಸನವನ್ನು ಹಿಂದು ಧಾರ್ಮಿಕ ದತ್ತಿ ಇಲಾಖೆ ಮತ್ತು ದೇವಸ್ಥಾನಗಳಿಂದ ನೀಡುವ ಬದಲು, ಇನ್ನು ಮುಂದೆ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ , ಹಜ್ ಮತ್ತು ವಕ್ಫ್ ಇಲಾಖೆಯ ಮೂಲಕ ತಸ್ತಿಕ್ ಮತ್ತು ವರ್ಷಾಸನ ನೀಡಲು ಅನುದಾನ ಬಿಡುಗಡೆ ಮಾಡಬೇಕೆಂದು ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವರದಿಯನ್ನಾಧರಿಸಿ ಸರ್ಕಾರ ಆದೇಶ ನೀಡಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss