January18, 2026
Sunday, January 18, 2026
spot_img

ವಿದೇಶಗಳ ಮೇಲಿನ ಅವಲಂಬನೆ ದೇಶದ ನಿಜವಾದ ಶತ್ರು: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೇರೆ ದೇಶಗಳ ಮೇಲಿನ ಅವಲಂಬನೆಯು ದೇಶದ ನಿಜವಾದ ಶತ್ರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಗುಜರಾತ್‌ನಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ವಿದೇಶಿ ರಾಷ್ಟ್ರಗಳ ಮೇಲಿನ ಹೆಚ್ಚಿನ ಅವಲಂಬನೆಯು ಭಾರತವನ್ನು ಹಿನ್ನಡೆಗಳಿಗೆ ಗುರಿಯಾಗಿಸುತ್ತದೆ. ಆದ್ದರಿಂದ ಈ ದುರ್ಬಲತೆಯನ್ನು ನಿವಾರಿಸುವಲ್ಲಿ ಎಲ್ಲರೂ ಒಗ್ಗೂಡಬೇಕೆಂದು ಅವರು ಒತ್ತಾಯಿಸಿದರು.

ಇಂದು ಭಾರತ ‘ವಿಶ್ವಬಂಧು’ ಮನೋಭಾವದೊಂದಿಗೆ ಮುಂದುವರಿಯುತ್ತಿದೆ. ನಮಗೆ ಜಗತ್ತಿನಲ್ಲಿ ಯಾವುದೇ ಪ್ರಮುಖ ಶತ್ರುವಿಲ್ಲ. ನಮ್ಮ ದೊಡ್ಡ ಶತ್ರು ಎಂದರೆ ಇತರ ದೇಶಗಳ ಮೇಲಿನ ನಮ್ಮ ಅವಲಂಬನೆ. ಇದು ನಮ್ಮ ದೊಡ್ಡ ಶತ್ರು. ನಾವು ಒಟ್ಟಾಗಿ ಭಾರತದ ಈ ಶತ್ರುವಾದ ಅವಲಂಬನೆಯನ್ನು ಸೋಲಿಸಬೇಕು ಎಂದು ಅವರು ಕರೆ ನೀಡಿದರು.

ವಿದೇಶಿ ಅವಲಂಬನೆ ಹೆಚ್ಚಾದಷ್ಟೂ ದೇಶದ ವೈಫಲ್ಯ ಹೆಚ್ಚಾಗುತ್ತದೆ. ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗಾಗಿ, ವಿಶ್ವದ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ದೇಶವು ಆತ್ಮನಿರ್ಭರವಾಗಬೇಕು. ನಾವು ಇತರರ ಮೇಲೆ ಅವಲಂಬಿತರಾಗಿದ್ದರೆ, ನಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾಗುತ್ತದೆ. 1.4 ಶತಕೋಟಿ ದೇಶವಾಸಿಗಳ ಭವಿಷ್ಯವನ್ನು ನಾವು ಇತರರಿಗೆ ಬಿಡಲು ಸಾಧ್ಯವಿಲ್ಲ ಎಂದು ಪ್ರಧಾನಿ ಹೇಳಿದರು.

ಚಿಪ್ಸ್ ಆಗಿರಲಿ ಅಥವಾ ಹಡಗುಗಳಾಗಿರಲಿ ನಾವು ಅವುಗಳನ್ನು ಭಾರತದೊಳಗೆ ತಯಾರಿಸಬೇಕು. ಭಾರತದ ಅಭಿವೃದ್ಧಿಯನ್ನು ಇತರ ದೇಶಗಳ ಮೇಲೆ ಬಿಡಲು ಸಾಧ್ಯವಿಲ್ಲ. ಹಾಗೇ ಭಾರತದ ಭವಿಷ್ಯದ ಪೀಳಿಗೆಯನ್ನು ಪಣಕ್ಕಿಡಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು. ನಮ್ಮ ದೇಶದ ನೂರು ದುಃಖಗಳಿಗೆ ಒಂದೇ ಒಂದು ಔಷಧಿಯೆಂದರೆ ಅದು ಸ್ವಾವಲಂಬಿ ಭಾರತ ಎಂದು ಮೋದಿ ಹೇಳಿದರು.

Must Read

error: Content is protected !!