ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಾದ್ಯಂತ ದಿಢೀರ್ ಉಂಟಾಗಿರುವ ವೈಪರಿತ್ಯಗಳ ಪ್ರಭಾವದಿಂದ ಮುಂದಿನ ಕೆಲವು ದಿನಗಳು ಉತ್ತಮ ಮಳೆ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಮಂಗಳವಾರ ಬಂಗಾಳಕೊಲ್ಲಿ ಸಮುದ್ರದ ವಾಯವ್ಯ ಮತ್ತು ಪಶ್ಚಿಮ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ಕುರಿತು ಭಾರತೀಯ ಹವಾಮಾನ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.
ವಾಯುಭಾರ ಕುಸಿತದ ಸ್ಥಳದಲ್ಲಿ ಸಮುದ್ರ ಮೇಲ್ಮೈನಲ್ಲಿ 7.6 ಕೀಲೋ ಮಿಟರ್ ಎತ್ತರದಲ್ಲಿ ಸುಳಿಗಾಳಿಯೊಂದು ಸೃಷ್ಟಿಯಾಗಿದೆ. ಇದು ದಕ್ಷಿಣಕ್ಕೆ ಓರೆಯಾಗಿದ್ದು, ಅದೇ ಮಾರ್ಗವಾಗಿ ದಟ್ಟಗಾಳಿ ಬೀಸುವ ಸಾಧ್ಯೆತೆಗಳು ಇದೆ.
ಈ ವೈಪರಿತ್ಯದಿಂದ ಒಂದೆಡೆ ಗಾಳಿಯ ಒತ್ತಡ ಹೆಚ್ಚಾಗಿ ಮಳೆ ಸುರಿಸುವ ಮೋಡಗಳು ಒಂದೆಡೆ ಜಮಾಯಿಸಿ ಭಾರಿ ಮಳೆ ಸುರಿಸುವ ಸಾಧ್ಯತೆಗಳು ಹೆಚ್ಚಿರುತ್ತದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆ ಮತ್ತು ತಂಪು ವಾತಾವರಣ ನಿರ್ಮಾಣವಾಗಿದೆ. ಈ ವಾಯುಭಾರತ ಕುಸಿತದಿಂದ ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಪ್ರಯಾಣ ಇರಲಿದೆ, ಕರಾವಳಿ ಜಿಲ್ಲೆಗಳಿಗೂ ಭಾರಿ ಮಳೆ ಆಗಲಿದೆ ಎಂದು ತಿಳಿಸಿದೆ .
ಸೆಪ್ಟಂಬರ್ 6 ಮತ್ತು 7ರಂದು ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಜಿಲ್ಲೆಗಳಿಗೆ ಅತ್ಯಧಿಕ ಮಳೆ ಬರಲಿದ್ದು, ಅವುಗಳಿಗೆ ಹಳದಿ ಎಚ್ಚರಿಕೆ ಘೋಷಿಸಲಾಗಿದೆ.
ಇದರೊಂದಿಗೆ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟಂಬರ್ 9 ಮತ್ತು 10 ರಂದು ವ್ಯಾಪಕ ಮಳೆ ಬರಲಿದ್ದು, ಈ ಎರಡು ದಿನ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.
ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ತುಮಕೂರು, ಶಿವಮೊಗ್ಗ, ಚಿತ್ರದುರ್ಗ, ವಿಜಯನಗರ, ಬಳ್ಳಾರಿ ಸೇರಿದಂತೆ ವಿವಿಧಡೆ ಮಳೆ ಅಷ್ಟಾಗಿ ಬರುವ ಮುನ್ಸೂಚನೆ ಸದ್ಯಕ್ಕೆ ಇಲ್ಲ.