ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರವರೆಗೂ ಕೇರಳದಲ್ಲಿ ಭಾರೀ ಮಳೆ ಮುಂದುವರೆಯಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ (IMD) ಪಥನಾಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ನಾಳೆ (ಸೆ. 5) ಆರೆಂಜ್ ಅಲರ್ಟ್ (Orange Alert) ಘೋಷಿಸಿದೆ.
ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ ಜಿಲ್ಲೆಗಳಿಗೆ ಇನ್ನೆರಡು ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ. ಸೆಪ್ಟೆಂಬರ್ 5ರಂದು ಪಥನಾಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುಂದುವರೆಯಲಿದೆ. ಸೆಪ್ಟೆಂಬರ್ 6ರಂದು ಎರ್ನಾಕುಲಂ, ಇಡುಕ್ಕಿಯಲ್ಲಿ ಮಳೆಯಾಗಲಿದೆ. ಸೆಪ್ಟೆಂಬರ್ 7ರಂದು ಅಲಪ್ಪುಳ, ಎರ್ನಾಕುಲಂ, ತ್ರಿಶೂರ್, ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ.
ಕೇರಳದ ಉತ್ತರ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಗುಡ್ಡಗಾಡು ಪ್ರದೇಶಗಳಲ್ಲಿ ವಾಸಿಸುವವರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಶಾನ್ಯ ಬಂಗಾಳ ಕೊಲ್ಲಿಯಲ್ಲಿ ಚಾಲ್ತಿಯಲ್ಲಿರುವ ಚಂಡಮಾರುತ ವ್ಯವಸ್ಥೆಯು ಮುಂದಿನ 24 ಗಂಟೆಗಳಲ್ಲಿ ವಾಯುವ್ಯ ಬಂಗಾಳ ಕೊಲ್ಲಿ ಮತ್ತು ಮಧ್ಯ ಪಶ್ಚಿಮ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ.