ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಚೆನ್ನೈನಲ್ಲಿ ಭಾರೀ ಮಳೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಭಾರೀ ಮಳೆಯಾಗುತ್ತಿದೆ. ರಸ್ತೆಗಳು ನೀರಿನಿಂದ ಜಲಾವೃತವಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದ್ದು ಸಂಚಾರಕ್ಕೆ ಸಮಸ್ಯೆಯಾಗಿದೆ. ದಟ್ಟವಾದ ಮಂಜು ಅವರಿಸಿದ್ದು ರಸ್ತೆಗಳು ಕಾಣದಾಗಿದೆ.

ತಮಿಳುನಾಡಿನ ಕರಾವಳಿ ಮತ್ತು ಡೆಲ್ಟಾ ಜಿಲ್ಲೆಗಳಲ್ಲಿ ಮಂಗಳವಾರದಿಂದ ಮುಂದಿನ ಐದು ದಿನಗಳ ಕಾಲ ತೀವ್ರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

ವಾಯುಭಾರ ಕುಸಿತದಿಂದ ರಾಮನಾಥಪುರಂ, ತಿರುಚಿರಾಪಳ್ಳಿ, ಪೆರಂಬಲೂರು, ಕಲ್ಲಕುರಿಚಿ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಕಡಲೂರು ಮತ್ತು ಮೈಲಾಡುತುರೈ ಜಿಲ್ಲೆಗಳು ಮತ್ತು ಕಾರೈಕಲ್‌ನ ಕೆಲವು ಸ್ಥಳಗಳಲ್ಲಿ ಭಾರೀ ಮಳೆ ಮತ್ತು ಒಂದು ಅಥವಾ ಎರಡು ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾರೀ ಮಳೆಯಿಂದಾಗಿ, ರಾಮನಾಥಪುರಂ, ತೂತುಕುಡಿ, ತಿರುನೆಲ್ವೇಲಿ, ತೆಂಕಶಿ ಮತ್ತು ತಿರುವರೂರು ಜಿಲ್ಲೆಗಳಲ್ಲಿ ನವೆಂಬರ್ 20 ಬುಧವಾರದಂದು ಶಾಲೆಗಳಿಗೆ ರಜೆ ನೀಡಲಾಗಿತ್ತು.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!