ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಹಲವು ಕಡೆ ಭಾರೀ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದಲ್ಲಿ ಚಳಿಯ ಪ್ರಮಾಣ ಹೆಚ್ಚುತ್ತಿದ್ದು, ಇದರ ನಡುವೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ ಮುಂದಿನ 24 ಗಂಟೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ನವೆಂಬರ್‌ 22 ರಿಂದ ರಾಜ್ಯದಲ್ಲಿ ಮಳೆ ಆಗಲಿದ್ದು, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆ ಬೀಳಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ ಸೇರಿ ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ ಹಾಗೂ ಮೈಸೂರು, ತುಮಕೂರು, ವಿಜಯಪುರ ಸೇರಿ ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!