ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಮುಂದಿನ 4 ದಿನ ಹಲವೆಡೆ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮುಂದಿನ 4 ದಿನ ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಅಂದ್ರೆ ಡಿಸೆಂಬರ್ 29ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಹಲವು ಭಾಗಗಳಾದ ಬೆಂಗಳೂರು, ಮಂಡ್ಯ, ಮೈಸೂರು, ಕೋಲಾರ, ರಾಮನಗರದಲ್ಲಿ ಮಳೆಯ ಸಾಧ್ಯತೆ ಹೆಚ್ಚಿದೆ ಎಂದು ಸೂಚಿಸಿದೆ.

ಡಿಸೆಂಬರ್ 27 ಮತ್ತು 28 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ, ರಾಮನಗರ ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!