ಹೊಸದಿಗಂತ ಡಿಜಿಟಲ್ ಡೆಸ್ಕ್:
ಸದನದಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಿದ ಡಿಸಿಎಂ ಡಿಕೆ ಶಿವಕುಮಾರ್ ನಡೆಗೆ ಜೆಡಿಎಸ್ ತೀವ್ರ ಟೀಕಿಸಿದೆ.
ಎಕ್ಸ್‌ನಲ್ಲಿ ಡಿಕೆಶಿವಕುಮಾರ್ ವಿರುದ್ದ ಲೇವಡಿ ಮಾಡಿರೋ ಜೆಡಿಎಸ್, ಉಚ್ಛಾಟನೆಗೆ ಹೆದರಿ ಕ್ಷಮೆಯಾಚಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಕಾಲೆಳೆದಿದೆ.
ಉಚ್ಛಾಟನೆಗೆ ಹೆದರಿ ಕ್ಷಮೆಯಾಚಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್. ಸದನದಲ್ಲಿ ಹುಲಿ, ಹೈಕಮಾಂಡ್ ಮುಂದೆ ಇಲಿ. ವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿ ಇಟಲಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದ ರಣಹೇಡಿ ಡಿಕೆಶಿ ಅಧಿಕಾರ ಉಳಿಸಿಕೊಳ್ಳಲು, ಉಚ್ಛಾಟನೆಯಿಂದ ಪಾರಾಗಲು ಮಂಡಿಯೂರಿ ಕ್ಷಮೆಯಾಚಿಸಿದ್ದಾರೆ ಎಂದು ಟೀಕಿಸಿದ್ದಾರೆ.