ವೀಕೆಂಡ್ ಟೆಂಟ್ ನಲ್ಲಿ ಉಪಮುಖ್ಯಮಂತ್ರಿ: ಈ ವಾರವೇ ಮುಗಿಯುತ್ತಾ ವೀಕೆಂಡ್ ವಿತ್ ರಮೇಶ್ ಶೋ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕನ್ನಡ ಜನಪ್ರಿಯ ಟಾಕ್ ಶೋ ವೀಕೆಂಡ್ ವಿತ್ ರಮೇಶ್ (Weekend with Ramesh) ಈ ವಾರವೇ ಮುಕ್ತಾಯವಾಗಲಿದೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಪಿಸೋಡ್ ಮೂಲಕ ಈ ಸೀಸನ್ ಮುಗಿಯಲಿದೆ.

ಈಗಾಗಲೇ ಡಿಕೆಶಿ ಅವರ ಎಪಿಸೋಡ್ ನ ಪ್ರೊಮೋ ಕೂಡ ರಿಲೀಸ್ ಆಗಿದ್ದು, ಪ್ರೊಮೋನಲ್ಲೇ ‘ಗ್ರ್ಯಾಂಡ್ ಫಿನಾಲೆ’ (Grand Finale)ಎಂದು ಹಾಕಲಾಗಿದೆ. ಸಾಧಕರ ಸೀಟಿನಲ್ಲಿ ಕುಳಿತಿರುವ ಡಿ.ಕೆ. ಶಿವಕುಮಾರ್ (D.K. Shivakumar) ತಮ್ಮ ಬದುಕನ್ನು ವೀಕೆಂಡ್ ಟೆಂಟ್ ನಲ್ಲಿ ರಿವೈಂಡ್ ಮಾಡಿಕೊಂಡು ನೋಡಿದ್ದಾರೆ.

ಕೇವಲ ಶಿವಕುಮಾರ್ ಮಾತ್ರವಲ್ಲ, ಅವರ ಪತ್ನಿ, ಮಕ್ಕಳು, ಕುಟುಂಬದ ಸದಸ್ಯರು, ಸ್ನೇಹಿತರು, ರಾಜಕಾರಣಿಗಳು ಹೀಗೆ ಅನೇಕರು ಈ ಎಪಿಸೋಡ್ ನಲ್ಲಿ ಕಾಣಿಸಿಕೊಂಡಿದ್ದು, ಅವರೆಲ್ಲರೂ ಡಿಕೆಶಿ ಬದುಕಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ.

ನಟ ರಮೇಶ್ ಅರವಿಂದ್ (Ramesh Aravind) ಜೊತೆ ಈಗಾಗಲೇ ವೀಕೆಂಡ್ ಟೆಂಟ್ ನಲ್ಲಿ ರಮ್ಯಾ, ಡಾಲಿ, ಪ್ರೇಮ್, ಜೈ ಜಗದೀಶ್, ಪ್ರಭುದೇವ ಸೇರಿದಂತೆ ಹಲವು ಗಣ್ಯರು ತಮ್ಮ ಜೀವನವನ್ನು ರಿವೈಂಡ್ ಮಾಡಿಕೊಂಡು ನೋಡಿದ್ದಾರೆ. ಇದೀಗ ಟ್ರಬಲ್ ಶೂಟರ್ ಡಿಕೆಶಿ ಅವರು ಸಾಧಕರ ಸೀಟ್ ಮೇಲೆ ಕೂರಿಸಿಕೊಂಡು ಅವರ ಕಥೆ ಕೇಳಿದ್ದಾರೆ.

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ರಾಜಕೀಯ ವ್ಯಕ್ತಿಗಳು ಬರುತ್ತಿರುವುದು ಇದೇ ಮೊದಲೇನೂ ಅಲ್ಲ. ಹಲವು ಸೀಸನ್ ಗಳಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ಇದೀಗ ಈ ವಾರಾಂತ್ಯದಲ್ಲಿ ಡಿಕೆಶಿ ಅವರ ಎಪಿಸೋಡ್ ಅನ್ನು ಪ್ರಸಾರ ಮಾಡಲಾಗುತ್ತದೆ ಎಂಬ ಮಾಹಿತಿ ಇದ್ದು, ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಡಿಕೆಶಿ ಕಂತುಗಳನ್ನು ನೋಡಬಹುದಾಗಿದೆ. ಒಟ್ನಲ್ಲಿ ಡಿಕೆಶಿ ಅವರ ರಾಜಕೀಯ ಸಾಧನೆಯ ಕಥೆ ಕೇಳುವ ಮೂಲಕ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಮಂಗಳ ಹಾಡಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!