ಹೊಸದಿಗಂತ ಹಾಸನ :
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಎತ್ತಿನಹೊಳೆ ಟ್ರಯಲ್ ಪ್ರದೇಶಕ್ಕೆ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ನೀಡಲಿದ್ದಾರೆ.
ಸಕಲೇಶಪುರ ತಾಲೂಕಿನಲ್ಲಿ ಪ್ರವಾಸ ಕೈಗೊಳ್ಳಲಿರುವ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಮಧ್ಯಾಹ್ನ 3.30 ಕ್ಕೆ ಸಕಲೇಶಪುರ ತಾಲ್ಲೂಕಿನ, ಕುಂಬರಡಿ ಕಾಫಿ ಎಸ್ಟೇಟ್, ಸಂಜೆ 4.30 ಕ್ಕೆ ಸಕಲೇಶಪುರ ತಾಲೂಕಿನ ದೊಡ್ಡನಾಗರ ಬಳಿಯ ವಿತರಣಾ ತೊಟ್ಟಿಗೆ, ಸಂಜೆ 5.30 ಕ್ಕೆ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಬಳಿಯ ವಿತರಣಾ ತೊಟ್ಟಿಗೆ ಭೇಟಿ ನೀಡಲಿದ್ದಾರೆ.
ಉಪಮುಖ್ಯಮಂತ್ರಿ ಹೆಚ್ಚುವರಿ ಆಪ್ತ ಕಾರ್ಯದರ್ಶಿ ಬಿ.ಎಸ್. ಶ್ರೀಧರ್ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರವಾಸದ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ಮುಖಂಡರು “ಸುಗಂಧರಾಜ” ಹೂವಿನ ಹಾರವನ್ನು ಹಾಕದಂತೆ ಮನವಿ ಮಾಡಿದ್ದಾರೆ.