ಹೊಸದಿಗಂತ ವರದಿ ಮಡಿಕೇರಿ:
ಕೊಡಗು ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಶ್ರೀಧರಮೂರ್ತಿ (59) ಅವರು ಮಂಗಳವಾರ ಪೂರ್ವಾಹ್ನ ತಮ್ಮ ಕಚೇರಿಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಮಂಗಳವಾರ ಬೆಳಗ್ಗೆ 11.30ರ ಸುಮಾರಿಗೆ ಇಲಾಖೆಯ ಮಡಿಕೇರಿಯಲ್ಲಿರುವ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಸಭೆಗೆ ಆಗಮಿಸಿದ ಶ್ರೀಧರಮೂರ್ತಿ ಅವರು, ಕುರ್ಚಿಯಲ್ಲಿ ಕುಳಿತುಕೊಳ್ಳಲು ಮುಂದಾಗಿದ್ದಾರೆ. ಆದರೆ ಹಠಾತ್ತನೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅದಾಗಲೇ ಅವರು ಸಾವಿಗೀಡಾಗಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.
ಮೂಲತಃ ಚಿತ್ರದುರ್ಗ ಜಿಲ್ಲೆಯವರಾಗಿರುವ ಶ್ರೀಧರಮೂರ್ತಿ ಅವರು ಕೊಡಗು ಜಿಲ್ಲೆಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾಗಿ ನೇಮಕಗೊಂಡು ಕೇವಲ 28 ದಿನಗಳಷ್ಟೇ ಆಗಿದ್ದು, ಇನ್ನು ಕೆಲವೇ ತಿಂಗಳಲ್ಲಿ ಅವರು ನಿವೃತ್ತರಾಗುವುದರಲ್ಲಿದ್ದರು.ಆದರೆ ಕರ್ತವ್ಯದಲ್ಲಿರುವಾಗಲೇ ಅವರು ಸಾವಿಗೀಡಾಗಿದ್ದಾರೆ.