ಬೆಳಗಾವಿಯಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲಿನಿಂದ ಹಲವು ರೈಲುಗಳ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮೀರಜ್ ಕಡೆ ಹೊರಟಿದ್ದ ಗೂಡ್ಸ್ ರೈಲಿನ‌ ಎರಡು ಬೋಗಿಗಳು ಹಳಿ‌ ತಪ್ಪಿ, ಉರುಳಿ ಬಿದ್ದ ಘಟನೆ ಮಂಗಳವಾರ ಬೆಳಗ್ಗೆ ಬೆಳಗಾವಿ ನಗರದ ಮಿಲಿಟರಿ ಮಹಾದೇವ ಮಂದಿರ ಬಳಿ ಸಂಭವಿಸಿತು.

ಜಿಂದಾಲ್‌ ಕಾರ್ಖಾನೆಯಲ್ಲಿ ಕಬ್ಬಿಣದ ಅದಿರು ತುಂಬಿಕೊಂಡು ಮೀರಜ್ ಕಡೆಗೆ ಗೂಡ್ಸ್ ರೈಲು ಹೊರಟಿತ್ತು. ಒಂದು ಹಳಿಯಿಂದ ಮತ್ತೊಂದು ಹಳಿಗೆ ರೈಲನ್ನು ಬದಲಾಯಿಸುವಾಗ ವ್ಯತ್ಯಾಸವಾದ ಹಿನ್ನೆಲೆಯಲ್ಲಿ ರೈಲು ಹಳಿ ತಪ್ಪಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಘಟನೆಯಿಂದ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಸುಮಾರು 4 ಗಂಟೆ ದುರಸ್ತಿ ಕಾರ್ಯ ನಡೆಯಲಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

 ಬೆಳಗಾವಿ-ಮೀರಜ್ ಮಾರ್ಗದ ಎಲ್ಲ ರೈಲುಗಳ ಸಂಚಾರ ಬಂದ್ ಆಗಿದ್ದು, ದುರಸ್ತಿ ಕಾರ್ಯ ಮುಗಿದ ಬಳಿಕ ಪುನಃ ಸಂಚಾರ ಆರಂಭವಾಗಲಿದೆ. ಈಗಾಗಲೇ ಮೀರಜ್‌ನಿಂದ ಬರುತ್ತಿದ್ದ ಚಾಲುಕ್ಯ ಶರಾವತಿ ಎಕ್ಸ್‌ಪ್ರೆಸ್, ಎಲ್‌ಟಿಟಿ ದಾದರ್, ಅಜ್ಮೇರ್ ಎಕ್ಸ್‌ಪ್ರೆಸ್‌ ಮಾರ್ಗಮಧ್ಯದಲ್ಲಿಯೇ ನಿಂತುಕೊಂಡಿವೆ. ಬೆಳಗಾವಿಯಿಂದ ಹೊರಟಿದ್ದ ರಾಣಿ ಚನ್ನಮ್ಮ ಎಕ್ಸ್​ಪ್ರೆಸ್, ಬೆಂಗಳೂರು ಜೋದ್ಪುರ್ ಎಕ್ಸ್‌ಪ್ರೆಸ್, ಬೆಂಗಳೂರಿನಿಂದ ಭಗತ್ ಕೋಟಿ, ಕ್ಯಾಸಲ್ ರಾಕ್-ಮೀರಜ್ ಪ್ಯಾಸೆಂಜರ್, ಹರಿಪ್ರಿಯಾ ಎಕ್ಸ್‌ಪ್ರೆಸ್ ರೈಲುಗಳ ಸಂಚಾರದಲ್ಲಿ ಅಡ್ಡಿ ಉಂಟಾಗಿದೆ.ಇದರಿಂದಾಗಿ ಪ್ರಯಾಣಿಕರು ಪರದಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!