ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..
ಹೊಸ ದಿಗಂತ ವರದಿ, ಮಂಡ್ಯ:
ಕರ್ತವ್ಯಲೋಪ ಹಾಗೂ ಸತತ ಗೈರು ಹಾಜರಿಯಿಂದ ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದ್ದ ಹೊಳಲು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರವಿಕುಮಾರ್ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಕರ್ತವ್ಯದಿಂದ ಅಮಾನತುಗೊಳಿಸುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಬೇಕೆಂದು ಶಾಸಕ ಸಿ.ಎಸ್.ಪುಟ್ಟರಾಜು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚಿಸಿದರು.
ಕೋವಿಡ್ ವೈರಸ್ ಎರಡನೇ ಅಲೆಯ ಹಾವಳಿಯಿಂದ ಜನ ಸಾಮಾನ್ಯರು ನಲುಗುತ್ತಿರುವಾಗ ವಾರಕ್ಕೊಮ್ಮೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಹಾಜರಾತಿ ಪುಸ್ತಕದಲ್ಲಿ ಮುಂಚಿತವಾಗಿ ಸಹಿ ಹಾಕಿ ತೆರಳುತ್ತಿದ್ದ ವೈದ್ಯಾಧಿಕಾರಿ ರವಿಕುಮಾರ್ ವರ್ತನೆ ವಿರುದ್ಧ ಕಳೆದ ಸೋಮವಾರ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಇಂದು ಸ್ಥಳಕ್ಕೆ ಶಾಸಕ ಸಿ.ಎಸ್.ಪುಟ್ಟರಾಜು ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಚೇಗೌಡ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಜವರೇಗೌಡ ಹಾಗೂ ತಹಶೀಲ್ದಾರ್ ಚಂದ್ರಶೇಖರ್ ಶಂಗಾಳಿ ಉಪಸ್ಥಿತಿಯಲ್ಲಿ ಗ್ರಾಮಸ್ಥರ ಆಹವಾಲು ಆಲಿಸಿದ ಶಾಸಕರು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಜವರೇಗೌಡ ಅವರನ್ನು ತರಾಟೆಗೆ ತೆಗೆದುಕೊಂಡರು.
ಕೊರೊನಾ ಸೋಂಕು ನಿವಾರಣೆಗೆ ಹಗಲಿರುಳು ವೈದ್ಯ ಸಮೂಹ ಕಾರ್ಯನಿರ್ವಹಿಸುತ್ತಿರುವ ವೇಳೆ ಸ್ಥಳೀಯ ವೈದ್ಯರು ಉಡೊಯಿಂದ ಕಾರ್ಯನಿರ್ವಹಿಸಿ ಸತತ ಗೈರಾಗುತ್ತಿರುವ ಹಿನ್ನೆಲೆಯಲ್ಲಿ ಮುತುವರ್ಜಿ ವಹಿಸಬೇಕಾದ ತಾಲ್ಲೂಕು ಆರೋಗ್ಯಾಧಿಕಾರಿಗಳು ನಿರ್ಲಕ್ಷ್ಯ ತೋರಿದರೆ ಸಹಿಸುವುದಿಲ್ಲ. ಕೂಡಲೇ ಸಂಬಂಧಪಟ್ಟ ವೈದ್ಯರ ಮೇಲೆ ಕಾನೂನು ಕ್ರಮಕ್ಕೆ ಶಿಾರಸ್ಸು ಮಾಡಬೇಕೆಂದು ನಿರ್ದೇಶಿಸಿದರು.