ಅಯ್ಯಪ್ಪ ಸ್ವಾಮಿ ಬಗ್ಗೆ ಅವಹೇಳನಾಕಾರಿ ಪೋಸ್ಟ್ : ಶೀಘ್ರ ಕೈಗೊಳ್ಳುವಂತೆ ಪ್ರತಿಭಟನೆ

ಹೊಸದಿಗಂತ ವರದಿ ಹುಬ್ಬಳ್ಳಿ:

ಸಾಮಾಜಿಕ ಜಾಲತಾಣದಲ್ಲಿ ಅಯ್ಯಪ್ಪ ಸ್ವಾಮಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ವಿಜಯಪುರ ಜಿಲ್ಲೆಯ ಸಿಂದಗಿ ನಿವಾಸಿ ಜಗದೀಶ ಕಲಬುರಗಿ ಎಂಬಾತನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಭಾರತೀಯ ಅಯ್ಯಪ್ಪ ಸೇವಾ ಸಂಘ ಸದಸ್ಯರು ಪ್ರತಿಭಟನೆ ನಡೆಸಿದರು.
ಶನಿವಾರ ನಗರದ ರೈಲ್ವೆ ನಿಲ್ದಾಣದಲ್ಲಿ ಸಮಾವೇಶಗೊಂಡ ಸದಸ್ಯರು ಹಾಗೂ ಅಯ್ಯಪ್ಪ ಸ್ವಾಮಿ ಭಕ್ತರು ಪ್ರತಿಭಟನೆ ಮಾಡುವ ಮೂಲಕ ಮಿನಿವಿಧಾನ ಸೌಧ ತಲುಪಿದರು.

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಿವಪ್ಪ ಬಾರ್ಕಿ ಮಾತನಾಡಿ, ಸಿಂದಗಿ ಜಗದೀಶ ಕಲಬುರಗಿ ಎಂಬ ವ್ಯಕ್ತಿ ಅಯ್ಯಪ್ಪ ಸ್ವಾಮಿಯ ಜನ್ಮ ದಿನದ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದಾನೆ. ಬಹುಶಃ ಆ ವ್ಯಕ್ತಿಗೆ ತಂದೆ,ತಾಯಿ ಹಾಗೂ ಯಾರು ಹೇಳುವವರಿಲ್ಲ ಅನಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ತಂದೆ, ತಾಯಿ ನಂಬಿಕೆ. ಗುರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ನಡೆಯುತ್ತೇವೆ. ದೇವರು ಹಾಗೂ ಗುರು ಬಗ್ಗೆ ನಂಬಿಕೆ ಇಲ್ಲದವರು ಇಂತಹ ಮಾತುಗಳನ್ನಾಡುತ್ತಾರೆ. ಹೆಚ್ಚು ಪ್ರಚಾರ ಪಡೆಯುವ ಸಲುವಾಗಿ ಸನಾತ ಧರ್ಮ ಹಾಗೂ ದೇವರ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಸರಿಯಲ್ಲ. ಯಾವುದೇ ಧರ್ಮದ ಬಗ್ಗೆ ಹಗುರವಾಗಿ ಮಾತನಾಡಬಾದರು ಎಂದರು.

ಈಗಾಗಲೇ ಜಗದೀಶ ವಿರುದ್ಧ ಪ್ರಕರಣ ದಾಖಲಾಗಿದ್ದು, ಬಂಧನ ಸಹ ಮಾಡಲಾಗಿದೆ. ಮುಂದೆ ಈ ರೀತಿ ಆಗದಂತೆ ಕಠಿಣ ಶಿಕ್ಷೆ ವಿಧಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಆನಂದ ಗುರು ಸ್ವಾಮಿ, ಉಮೇಶ ಬಿ., ಮೋಹನ ಗುರುಸ್ವಾಮಿ, ರಾಮಚಂದ್ರ ಕರನಡೆ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!