March 13, 2026
Friday, March 13, 2026
spot_img

ಬಸವಣ್ಣ, ಅಕ್ಕಮಹಾದೇವಿಯವರ ವಿರುದ್ಧ ಅವಹೇಳನಕಾರಿ ಪೋಸ್ಟ್: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಹೊಸದಿಗಂತ ವರದಿ ​ಸೋಮವಾರಪೇಟೆ:

ಬಸವಣ್ಣ ಹಾಗೂ ಅಕ್ಕಮಹಾದೇವಿಯವರ ವಿರುದ್ಧ ಅವಹೇಳನಾಕಾರಿ ಪೋಸ್ಟ್ ಹಾಕಿರುವ ಕಿಡಿಗೇಡಿಯನ್ನು ಸರ್ಕಾರ ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕೆಂದು ವೀರಶೈವ ಲಿಂಗಾಯತ ಸಂಘಟನಾವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಆಗ್ರಹಿಸಿದ್ದಾರೆ.

ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರು ಹಾಗೂ ನಾಡಿನ ಮೊದಲ ಮಹಿಳಾ ಕವಯತ್ರಿ ಅಕ್ಕಮಹಾದೇವಿಯವರು ಕನ್ನಡ ನಾಡಿನ ಹೆಮ್ಮೆ. ಇವರುಗಳು 12ನೇ ಶತಮಾನದಲ್ಲಿಯೇ ಸಮಾಜದಲ್ಲಿ ಸುಧಾರಣೆ ತರಲು ಪ್ರಯತ್ನಿಸುವುದರೊಂದಿಗೆ ಈ ರಾಷ್ಟ್ರಕ್ಕೆ ಪ್ರಜಾಪ್ರಭುತ್ವದ ಅಡಿಪಾಯ ಹಾಕಿಕೊಟ್ಟ ಮಹನೀಯರು. ಅಂತಹವರ ಬಗ್ಗೆ ರಮಾಕಾಂತ್ ಎಂಬ ಕಿಡಿಗೇಡಿಯೊಬ್ಬ ಅಸಹ್ಯ ಹಾಗೂ ಆಕ್ಷೇಪಾರ್ಹ ಪದಗಳನ್ನು ಬಳಸಿ ಪೋಸ್ಟ್ ಹಾಕಿರುವುದು ನಾಗರಿಕ ಸಮಾಜ ಸಹಿಸಲು ಸಾಧ್ಯವಿಲ್ಲ ಎಂದು ಮಹೇಶ್ ಕಿಡಿಕಾರಿದ್ದಾರೆ. ಆದ್ದರಿಂದ ಸರ್ಕಾರ ಈ ಕಿಡಿಗೇಡಿಯನ್ನು ತಕ್ಷಣ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !