ಸಿಎಂ ಸಿದ್ದರಾಮಯ್ಯ, ಪತ್ನಿ ವಿರುದ್ಧ ಅವಹೇಳನಕಾರಿ ಪೋಸ್ಟ್​: ಎಫ್​ಐಆರ್​ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಪತ್ನಿ ವಿರುದ್ಧ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ಕಿಡಿಗೇಡಿಗಳ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ.

ಫೇಸ್​ಬುಕ್, ಇನ್ಸ್​ಟಾಗ್ರಾಂನಲ್ಲಿ ಅವಹೇಳನಕಾರಿ ಪೋಸ್ಟ್​ ಮಾಡಿದ್ದು, ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಕಾರ್ಯದರ್ಶಿ, ಕಾಂಗ್ರೆಸ್​ ಮುಖಂಡ ಸಂಜಯ್ ಯಾದವ್ ದೂರು ಆಧರಿಸಿ ಪೊಲೀಸರು ಹೈಗ್ರೌಂಡ್ಸ್ ಠಾಣೆಯಲ್ಲಿ IPC ಸೆಕ್ಷನ್ 153,153A,505(2) ಅಡಿ ಎಫ್​ಐಆರ್​​ ದಾಖಲಿಸಿದ್ದಾರೆ.

ದೂರಿನಲ್ಲಿ ಏನಿದೆ?
ಸಾಮಾಜಿಕ ಜಾಲತಾಣಗಳಲ್ಲಿ ‘ಕೃತಿಕಾ ಕೃತಿ’ ಎಂಬ ಹೆಸರಿನ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿಯ ವಿರುದ್ಧ ಅಶ್ಲೀಲವಾಗಿ ನಿಂದಿಸಿ ಅವಹೇಳನ ಮಾಡಿದ್ದು, ಜೊತೆಗೆ ಗೌರವಕ್ಕೆ ಧಕ್ಕೆ ತರಲಾಗಿದೆ. ಹಾಗಾಗಿ ಈ ಪೋಸ್ಟ್‌ಗಳನ್ನು ಹಾಕಿದವರನ್ನು ಪತ್ತೆ ಹಚ್ಚಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹೈಗ್ರೌಂಡ್ಸ್‌ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!