ಭಗವಂತ ಖೂಬಾ ವಿರುದ್ಧ ಅವಹೇಳನಕಾರಿ ಪೋಸ್ಟ್: ‘ಕೈ’ ವಿರುದ್ಧ ‘ಕಮಲ’ ಪಡೆ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೀದರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವ ಭಗವಂತ ಖೂಬಾ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಕಾನೂನು ಕ್ರಮ ಜರುಗಿಸಲು ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿದ್ದರು. ಇತ್ತೀಚೆಗೆ ಫೇಸ್ಬುಕ್ ಪುಟ “ವೈರಲ್ ಥಾಟ್ಸ್” ನಲ್ಲಿ ಖೂಬಾ ಬಗ್ಗೆ ಪೋಸ್ಟ್ ಹಾಕಲಾಗಿತ್ತು. ಈ ಪುಟದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಪ್ರಕಟಿಸಲಾಗಿತ್ತು.

ʼವಾಂಟೆಡ್ʼ ಮತ್ತು ʼಗೂಂಡಾʼ ಮುಂತಾದ ಅಸಭ್ಯ ಪದಗಳನ್ನು ಬಳಸಲಾಗಿದೆ. ಇದು ಸಾಮಾಜಿಕ ಮಾಧ್ಯಮ ನಿಯಮಗಳ ಉಲ್ಲಂಘನೆ ಎಂದು ಬಿಜೆಪಿ ಕಾರ್ಯಕರ್ತರು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!