ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಹೇಳನಕಾರಿಯಾಗಿ ಚಿತ್ರೀಕರಿಸಿ ವಾಟ್ಸಪ್ ಗ್ರೂಪ್ ನಲ್ಲಿ ಹರಿಯಬಿಟ್ಟವನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಹೊರವಲಯದ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ನಂದಾವರ ಅವರು ನೀಡಿರುವ ದೂರಿನನ್ವಯ ಪ್ರಕರಣ ದಾಖಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರನ್ನು ಹಸಿರು ಕೋಟು ಹಾಗೂ ತಲೆಗೆ ಟೋಪಿ ಧರಿಸಿ ಹಂದಿಯ ಮೇಲೆ ಕುಳಿತಿರುವಂತೆ ಚಿತ್ರೀಕರಿಸಿ ‘ಮಸೀದಿ ಕಡೆ ಸಿದ್ದು ಸವಾರಿ’ ಎಂಬ ತಲೆ ಬರಹವಿರುವ ಫೋಟೋವನ್ನು ವಾಟ್ಸಪ್ ಗ್ರೂಪ್ ನಲ್ಲಿ ಸೋಮನಗೌಡ ಎಂಬಾತ ಹರಿಯಬಿಟ್ಟಿದ್ದು ಈತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.