ಶಿಂಧೆ ಕುರಿತು ಅವಹೇಳನ ಹೇಳಿಕೆ: ಕಾಮಿಡಿಯನ್ ಕುನಾಲ್ ಕಮ್ರಾಗೆ ನಿರೀಕ್ಷಣಾ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಸೇರಿದಂತೆ ಅನೇಕ ಗಣ್ಯರ ವಿರುದ್ಧ ಅವಹೇನಕಾರಿಯಾಗಿ ಹಾಸ್ಯ ಮಾಡಿ ಸಂಕಷ್ಟಕ್ಕೀಡಾಗಿರುವ ಕಾಮಿಡಿಯನ್ ಕುನಾಲ್ ಕಮ್ರಾ ಗೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ.

ಕಾರ್ಯಕ್ರಮವೊಂದರಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರನ್ನು ದ್ರೋಹಿ ಎಂದು ಕರೆದಿದ್ದರು. ಇದರಿಂದ ಆಕ್ರೋಶಗೊಂಡ ಶಿವಸೇನೆ ಕಾರ್ಯಕರ್ತರು ಕುನಾಲ್ ಕಮ್ರಾ ಕಾರ್ಯಕ್ರಮ ನಡೆಸಿದ್ದ ಸ್ಟುಡಿಯೋವನ್ನು, ಸಭಾಂಗಣವನ್ನೇ ದಾಂಧಲೆ ನಡೆಸಿ ಧ್ವಂಸಗೊಳಿಸಿದ್ದರು.

ಹೀಗಾಗಿ ಕುನಾಲ್ ಕಮ್ರಾಮದ್ರಾಸ್ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ವನೂರಿನ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರ ತೃಪ್ತಿಗೆ ಬಾಂಡ್ ಅನ್ನು ಕಾರ್ಯಗತಗೊಳಿಸಬೇಕು ಎಂಬ ಷರತ್ತಿನ ಮೇಲೆ ನ್ಯಾಯಾಲಯವು ಕಮ್ರಾಗೆ ಜಾಮೀನು ನೀಡಿದೆ. ನ್ಯಾಯಮೂರ್ತಿ ಸುಂದರ್ ಮೋಹನ್ ಅವರು ಎರಡನೇ ಪ್ರತಿವಾದಿ (ಖಾರ್ ಪೊಲೀಸ್) ಗೆ ನೋಟಿಸ್ ಜಾರಿ ಮಾಡಿ, ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 7 ಕ್ಕೆ ಮುಂದೂಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!