ಹಿಂದು ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ: ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಹಿಂದು ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಸಚಿವ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ವಿಚಾರಣೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಆದೇಶ ಹೊರಡಿಸಲಾಗಿದೆ.

2022ರ ನವೆಂಬರ್ 6ರಂದು ಬೆಳಗಾವಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿಸತೀಶ್ ಜಾರಕಿಹೊಳಿ ಹಿಂದು ಎಂಬ ಪದ ಆಶ್ಲೀಲ, ಕೊಳಕು ಎಂಬ ಅರ್ಥ ನೀಡುತ್ತದೆ.ಹಿಂದುತ್ವ ಎಂಬುದು ಪರ್ಷಿಯನ್ ಪದವಾಗಿದೆ ಎಂದು ಹೇಳಿಕೆ ನೀಡಿದ್ದರು.

ಸತೀಸ್‌ ಜಾರಕಿಹೊಳಿ ಹೇಳಿಕೆ ಹಿನ್ನಲೆ ವಕೀಲ ದಿಲೀಪ್ ಕುಮಾರ್ ಎಂಬುವವರು ನೀಡಿದ್ದ ಖಾಸಗಿ ದೂರಿನ ಪ್ರಕರಣದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಚಿವ ಜಾರಕಿಹೊಳಿ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿ ವಿಚಾರಣೆ ನಡೆಸುವಂತೆ ಆದೇಶ ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!