ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣ ಕುರಿತ ತನಿಖೆಗೆ ಕರ್ನಾಟಕ ಹೈಕೋರ್ಟ್ ಮದ್ಯಂತರ ತಡೆ ನೀಡಿದೆ. ಈ ಕುರಿತು ಪೂಂಜಾ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವಡಗಿ ಸಮರ್ಥವಾಗಿ ವಾದ ಮಂಡಿಸಿದ್ದಾರೆ.
ಐಪಿಸಿ ಸೆ.153 ಎ ಅಡಿ ಕೇಸ್ ದಾಖಲಿಸಲು ಪ್ರಕರಣ ಯೋಗ್ಯವಾಗಿಲ್ಲ. ಕಾರಣ ಹರೀಶ್ ಪೂಂಜಾ ವಿರುದ್ದ ವಿಳಂಬವಾಗಿ ದೂರು ದಾಖಲಿಸಲಾಗಿದೆ. ಪೂಂಜಾ ಹೇಳಿಕೆ ನೀಡಿದ ಬಳಿಕ ಯಾವುದೇ ಶಾಂತಿಭಂಗದ ಕೃತ್ಯ ನಡೆದಿಲ್ಲ. ಈ ಹೇಳಿಕೆ ಪ್ರಚೋದನೆ ಸಷ್ಟಿಸಿಲ್ಲ ಎಂದು ಪ್ರಭುಲಿಂಗ ನಾವಡಗಿ ವಾದ ಮಂಡಿಸಿದ್ದಾರೆ. ಎರಡೂ ಕಡೆಯ ವಾದ ಆಲಿಸಿದ ಹೈಕೋರ್ಟ್ ತನಿಖೆಗೆ ಮದ್ಯಂತರ ತಡೆ ನೀಡಿದೆ.
ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ವಿಜಯೋತ್ಸವದಲ್ಲಿ ಹರೀಶ್ ಪೂಂಜ, ಮುಖ್ಯಮಂತ್ರಿ ಸಿದ್ದರಾಮಯ್ಯ 24 ಕಾರ್ಯಕರ್ತರನ್ನು ಹತ್ಯೆ ಮಾಡಿರುವುದಾಗಿ ತುಳುವಿನಲ್ಲಿ ಮಾಡಿದ ಭಾಷಣದಲ್ಲಿ ಹೇಳಿದ್ದರು. ಈ ಭಾಷಣದ ಬೆನ್ನಲ್ಲೇ, ಪೂಂಜ ವಿರುದ್ಧ ಪುತ್ತೂರು , ಬೆಳ್ತಂಗಡಿ ಹಾಗೂ ಬಂಟ್ವಾಳ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಾಗಿತ್ತು.