March 10, 2026
Tuesday, March 10, 2026
spot_img

ಶ್ರೀ ಕ್ಷೇತ್ರ ಧರ್ಮಸ್ಥಳ ಬಗ್ಗೆ ಅವಹೇಳನ ವಿಡಿಯೋ: ‘ಸಂಚಾರಿ ಸ್ಟುಡಿಯೋ’ ಯೂಟ್ಯೂಬರ್ ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನ್ಯಾಯಾಲಯ ಆದೇಶ ಉಲ್ಲಂಘನೆ ಪ್ರಕರಣದಲ್ಲಿ ಜೈಲು ಶಿಕ್ಷೆಯಾಗಿರುವ ಹಿನ್ನೆಲೆಯಲ್ಲಿ ಸಂಚಾರಿ ಸ್ಟುಡಿಯೋ ಯೂಟ್ಯೂಬ್ ಚಾನೆಲ್‌ನ ಸಂತೋಷ್ ಮರ್ಧಾಳ ಎಂಬವರನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನಕಾರಿಯಾಗಿ ಯೂಟ್ಯೂಬ್‌ನಲ್ಲಿ ವಿಡಿಯೋ ಪ್ರಸಾರ ಮಾಡಿದ ಪ್ರಕರಣ ಸಂಬಂಧ ಬೆಂಗಳೂರಿನ ನ್ಯಾಯಾಲಯದಿಂದ ಸಂತೋಷ್‌ಗೆ ನೋಟಿಸ್ ಜಾರಿಯಾಗಿತ್ತು. ಅದಾದ ಬಳಿಕವೂ ಮತ್ತೆ ವಿಡಿಯೋ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ನ್ಯಾಯಾಲಯ 30 ದಿನಗಳ ಕಾಲ ಜೈಲು ಶಿಕ್ಷೆ ನೀಡಿ ಆದೇಶ ಹೊರಡಿಸಿತ್ತು. ಇದೀಗ ಕೋರ್ಟ್ ಸಿಬ್ಬಂದಿ ಜೊತೆಯಲ್ಲಿ ಆಗಮಿಸಿದ ಬೆಂಗಳೂರು ಪೊಲೀಸರು, ಕಡಬ ಪೋಲೀಸರ ಸಹಕಾರದೊಂದಿಗೆ ಸಂತೋಷ್‌ನನ್ನು ಮರ್ದಾಳದಿಂದ ವಶಕ್ಕೆ ಪಡೆದು ಕರೆದೊಯ್ದಿದ್ದು ಬೆಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !