ಹೊಸದಿಗಂತ ಡಿಜಿಟಲ್ ಡೆಸ್ಕ್:
ವರದಕ್ಷಿಣೆ ಕಿರುಕುಳದಿಂದ ಬೇಸತ್ತ ನವವಿವಾಹಿತೆ ಪತ್ರ ಬರೆದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸ (24) ಮೃತ ದುರ್ದೈವಿ. ಕೋಲಾರ ಹೊರವಲಯದ ಸಹಕಾರ ನಗರದಲ್ಲಿ ಈ ಘಟನೆ ನಡೆದಿದೆ.
ಒಂದು ವರ್ಷದ ಹಿಂದೆ ಮಾನಸ ಕೋಲಾರ ತಾಲೂಕಿನ ತೂರಾಂಡಹಳ್ಳಿ ಗ್ರಾಮದ ಉಲ್ಲಾಸ್ ಗೌಡ ಎಂಬುವರನ್ನು ವಿವಾಹವಾಗಿದ್ದರು. ಪತಿ ಉಲ್ಲಾಸ್ ಮತ್ತು ಕುಟುಂಬಸ್ಥರು ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ವೇಳೆ ಮಾನಸ ತನ್ನ ಮನೆಗೆ ಬಂದು ಪೋಷಕರೊಂದಿಗೆ ವಾಸವಾಗಿದ್ದರು.
ಆದರೆ ಇದೀಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.