ಹೊಸದಿಗಂತ ಡಿಜಿಟಲ್ ಡೆಸ್ಕ್:
ಸುಪ್ರೀಂ ಕೋರ್ಟ್ ಇಂದು ಬಂಗಾಳದಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 25,753 ಶಿಕ್ಷಕರು ಮತ್ತು ಇತರ ಸಿಬ್ಬಂದಿ ನೇಮಕಾತಿಯನ್ನು ಅಮಾನ್ಯಗೊಳಿಸಿದ್ದು, ಈ ಕುರಿತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿದ್ದು, ನ್ಯಾಯಾಂಗದ ಬಗ್ಗೆ ನನಗೆ ಅತ್ಯುನ್ನತ ಗೌರವ ಇದೆ. ಆದರೆ ಶಾಲಾ ಶಿಕ್ಷಕರ ನೇಮಕಾತಿ ಅಮಾನ್ಯಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಕೋರ್ಟ್ ತೀರ್ಪಿನ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನ್ಯಾಯಾಂಗ ಮತ್ತು ನ್ಯಾಯಾಧೀಶರ ಬಗ್ಗೆ ನನಗೆ ಅತ್ಯುನ್ನತ ಗೌರವ ಇದ್ದರೂ, ಮಾನವೀಯ ದೃಷ್ಟಿಕೋನದಿಂದ ನಾನು ಈ ತೀರ್ಪನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ತಮ್ಮ ಸರ್ಕಾರು ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸುವುದರ ಜತೆಗೆ ಎಲ್ಲಾ ರೀತಿಯ ಕಾನೂನು ಆಯ್ಕೆಗಳನ್ನು ಪರಿಶೀಲಿಸುತ್ತದೆ . ನಾವು ತೀರ್ಪನ್ನು ಒಪ್ಪಿಕೊಳ್ಳಬೇಕು ಮತ್ತು ಕಾನೂನುಬದ್ಧವಾಗಿ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ ಎಂದು ಪಶ್ಚಿಮ ಬಂಗಾಳ ಸಿಎಂ ತಿಳಿಸಿದ್ದಾರೆ.